ಪಾವಗಡ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ತಾಲೂಕು ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಶ್ರೀ ಮಹಾಂತ ಶಿವಯೋಗಿ ಸ್ವಾಮಿಗಳ ಜನ್ಮ ದಿನಾಚರಣೆಯ ಅಂಗವಾಗಿ ಆಚರಿಸುವಂತಹ ವ್ಯಸನ ಮುಕ್ತ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಡೊಳ್ಳು ಒಡೆಯುವ ಮೂಲಕ ಸಿಪಿಐ ಸುರೇಶ್ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ವ್ಯಸನ ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಅಧಿಕಾರಿಗಳಿಗೆ ನೆರದಿದ್ದ ಸಾರ್ವಜನಿಕರಿಗೆ ಬೋಧಿಸಲಾಯಿತು.
ಜಾಥಾದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಜಿ.ಕಿರಣ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ಟಿಪಿಒ ಬಸವರಾಜು, ಬಿಸಿಎಂ ಗೋಪಾಲಪ್ಪ, ತಾಲೂಕು ಹಿರಿಯ ಮೇಲ್ವಿಚಾರಕರಾದ ಪ್ರಭಾವಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296