ಕೊರಟಗೆರೆ: ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ೭೩ನೇ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ವಿಶೇಷ ಸಾಮಾಜಿಕ ಮತ್ತು ಜನಸೇವೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಟ್ಟಣ ಪಂಚಾಯತಿ ಸದಸ್ಯ ಕೆ.ಆರ್.ಓಬಳರಾಜು ತಿಳಿಸಿದರು.
ಕೊರಟಗೆರೆ ಪಟ್ಟಣದ ರಾಜೀವ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಗೆ ಸಮವಸ್ತ್ರ, ಪೌರ ಕಾರ್ಮಿಕರಿಗೆ ಸನ್ಮಾನ ಮತ್ತು ಸಮವಸ್ತ್ರ ವಿತರಣೆ, ಬಡ ಜನರಿಗೆ ಬೆಡ್ ಶೀಟ್, ರಕ್ತದಾನ ಶಿಬಿರ ಮತ್ತು ೪ ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಗೃಹ ಸಚಿವರ ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
ಪಪಂ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹುಟ್ಟು ಹಬ್ಬವು ಕೊರಟಗೆರೆ ಕ್ಷೇತ್ರದಲ್ಲಿ ಸಂಭ್ರಮದಿಂದ ನಡೆಯಲಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮತ್ತು ಅಭಿಮಾನಿ ಬಳಗದಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಪ.ಪಂ.ಸದಸ್ಯ ನಾಗರಾಜು, ನಂದೀಶ್, ಕಾಂಗ್ರೆಸ್ ಯುವಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪಕ್ ಎಸ್, ಮುಖಂಡರಾದ ಈಶ್ವರಪ್ಪ, ರಾಜಣ್ಣ, ಮಂಜುನಾಥ, ಕುಮಾರ್, ಮಹೇಶ್, ರವಿಕುಮಾರ್, ಲಕ್ಷ್ಮಣ್, ಮಂಜುಳ, ಅರವಿಂದ, ಗೋಪಿನಾಥ್, ನವೀನ, ಮುನ್ನಭಾಯಿ, ಗಿರೀಶ್ ಸೇರಿದಂತೆ ಇತರರು ಇದ್ದರು.
ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296