ಸರಗೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ ಆದಿಜಾಂಬವ ಸಮುದಾಯದ ಮುಖಂಡರು ಪಟ್ಟಣದಲ್ಲಿ ಶುಕ್ರವಾರ ದಂದು ಸಂಭ್ರಮಾಚರಣೆ ಮಾಡಿದರು.
ತಾಲ್ಲೂಕಿನ ಪಟ್ಟಣ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಮುಖಂಡರು ಅಲ್ಲಿಂದ ಪಟ್ಟಣ ಪಂಚಾಯಿತಿ ಮುಂಭಾಗದವರೆಗೆ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ಮಾಡಿದರು. ಪರಸ್ಪರ ಸಿಹಿ ಹಂಚಿದರು. ಅಲ್ಲಿಂದ ಪಟ್ಟಣ ಪಂಚಾಯಿತಿ ಮತ್ತು ಬಸ್ ನಿಲ್ದಾಣದ ಮುಂಭಾಗದಲ್ಲಿ ಮುಂದೆ ಪಟಾಗಿ ಸಿಡಿಸಿ, ಕೇಂದ್ರ ಮತ್ತು ರಾಜ್ಯಸರ್ಕಾರದ ಪರ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಬಿ ಮಟಕೆರೆ ಗ್ರಾಪಂ ಸದಸ್ಯ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಬೇಕು ಎಂಬುದು 30 ರಿಂದ 40 ವರ್ಷಗಳ ಹೋರಾಟದ ಬೇಡಿಕೆ. ಒಳ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡಿಕೊಂಡು ಬರಲಾಗಿತ್ತು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಹಲವು ವರ್ಷಗಳ ಈ ಬೇಡಿಕೆಯನ್ನು ಈಡೇರಿಸುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಈ ನಿರ್ಧಾರದಿಂದ ಇಡೀ ರಾಜ್ಯದ ಮಾದಿಗ ಸಮುದಾಯಕ್ಕೆ ಅನುಕೂಲವಾಗಲಿದೆ. ಇಡೀ ಸಮುದಾಯ ಈ ಸರ್ಕಾರಕ್ಕೆ ಕೃತಜ್ಞವಾಗಿದೆ’ ಎಂದರು.
ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿಯನ್ನು ಎಲ್ಲಾ ಕ್ಷೇತ್ರಗಳಲ್ಲಿ ಅನುಕೂಲ ಕಲ್ಪಿಸಬೇಕು ಮಾದಿಗ ಸಮುದಾಯದವರು ಮನವಿ ಮಾಡಿಕೊಂಡರು.
ಅಂದಿನ ಮಾಜಿ ಶಾಸಕ ದಿ ಚಿಕ್ಕಮಾದು ರವರು ಎಚ್ ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಈ ಜನಾಂಗಕ್ಕೆ ಹೆಚ್ಚಿನ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿದರು.
ಹಿಂದಿನ ಶಾಸಕರು ಮಾಡದ ಕೆಲಸವನ್ನು ಚಿಕ್ಕಮಾದು ದೊರಕಿಸಿಕೊಂಡರು .ಇವತ್ತಿನ ದಿನದಲ್ಲಿ ಸ್ಮರಣೆ ರವರನ್ನು ನಮ್ಮ ಸಮಾಜದ ಸಮುದಾಯದವರು ಮಾಡಿಕೊಳ್ಳುತ್ತೇವೆ.ಈಗಿನ ಶಾಸಕರಾದ ಅನಿಲ್ ಚಿಕ್ಕಮಾದು ರವರು ತಂದೆಯಂತೆ ಈ ಜನಾಂಗವನ್ನು ನೋಡಿಕೊಳ್ಳುತ್ತಿದ್ದಾರೆ ಎಂದರು.
‘ಇಡೀ ರಾಜ್ಯದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಪರಿಶಿಷ್ಠ ಜಾತಿಯಲ್ಲಿ 101 ಜಾತಿಗಳಿದ್ದು, ಎಡಗೈ ಸಮಾಜಕ್ಕೆ ಅನ್ಯಾಯವಾಗುತ್ತಿತ್ತು. ಉದ್ಯೋಗ, ಶೈಕ್ಷಣಿಕವಾಗಿ, ಇತರ ಸವಲತ್ತುಗಳಾಗಲಿ, ರಾಜಕೀಯ ಸ್ಥಾನಮಾನಗಳು ದೊರಕುತ್ತಿರಲಿಲ್ಲ. ಸರ್ಕಾರದ ಈ ನಿರ್ಣಯದಿಂದ ಬಲಗೈ, ಎಡಗೈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗುವಂತಾಗಿದೆ. . ಸರ್ಕಾರದ ಸವಲತ್ತುಗಳೂ ದೊರಕಿ ಸಮುದಾಯದವರು ಅಭಿವೃದ್ಧಿ ಹೊಂದಲಿದ್ದಾರೆ’ ಎಂದರು.
ಒಳ ಮೀಸಲಾತಿ ಜಾರಿಗೆ ಸಂಘ ಪರಿವಾರ ಕೊಡುಗೆ ಅಪಾರವಾಗಿದೆ. ಸಂಘ ಪರಿವಾರದ ಮುಖಂಡರು ಇದರ ಪರವಾಗಿ ಇದ್ದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಜಾರಿ ಮಾಡುವಾಗ ಎಡಗೈ ಸಮುದಾಯಕ್ಕೆ ಶೇ 6ರಷ್ಠು, ಬಲಗೈ ಸಮುದಾಯಕ್ಕೆ ಶೇ 5.5ರಷ್ಟು, ಸ್ಪೃಶ್ಯ ಸಮುದಾಯಕ್ಕೆ ಶೇ 4ರಷ್ಟು ಇತರೆ ಸಮುದಾಯಕ್ಕೆ ಶೇ 1ರಷ್ಟು ನೀಡಿ ಇರುವ ಶೇ 17ರಷ್ಠು ಮೀಸಲಾತಿಯನ್ನು ಎಲ್ಲರಿಗೂ ಹಂಚಿ ಸಮುದಾಯಕ್ಕೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾರೆ’ ಎಂದರು.
‘ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಡಿ ಸಾಮಾಜಿಕ ನ್ಯಾಯ ಕೊಡಬೇಕು ಎಲ್ಲ ವರ್ಗದವರಿಗೆ ಸಮಾನತೆ ಸಿಗಬೇಕು. ಎಂಬ ಮಾತು ನಮ್ಮ ಸಮಾಜಕ್ಕೆ ಸಿಕ್ಕಿದೆ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹನು ಮಾತನಾಡಿ 30 ವರ್ಷಗಳ ನಿರಂತರ ಹೋರಾಟದ ಫಲವಾಗಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದು ಸ್ವಾಗತಾರ್ಹ. ಇದೊಂದು ಐತಿಹಾಸಿಕ, ಕ್ರಾಂತಿಕಾರಕ ನಿರ್ಣಯ’ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ದಲಿತರ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಗೆ ಒಳ ಮೀಸಲಾತಿ ಅವಶ್ಯಕತೆ ಇದೆ. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಶಿಫಾರಸು ನನೆಗುದಿಗೆ ಬೀಳದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು’ ಎಂದರು.
ಬಾಬು ಜಗಜೀವನ ರಾಂ ವಿಚಾರ ವೇದಿಕೆಯ ಅಧ್ಯಕ್ಷರಾದ ನಾಗಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಭ್ರಮಾಚರಣೆ ಮಾತನಾಡಿ1990ರಲ್ಲಿ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿ ಹೋರಾಟ ಹೋರಾಟ ಮಾಡಲಾಗಿತ್ತು. 1992ರಲ್ಲಿ ಕರ್ನಾಟಕದಲ್ಲೂ ಆರಂಭವಾಯಿತು. ಮಾದಿಗ ದಂಡೋರ್ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿತ್ತು. 2005ರಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಸದಾಶಿವ ಆಯೋಗ ರಚನೆ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗ ವರದಿ ಸಲ್ಲಿಸಿತ್ತು, ನಮ್ಮ ಜನಾಂಗಕ್ಕೆ ನ್ಯಾಯ ಸಿಕ್ಕಿದೆ ಎಂದರು.
ಈ ಸಂದರ್ಭದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆ ತಾಲ್ಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಮಾಜಿ ಅಧ್ಯಕ್ಷ ತಾಲ್ಲೂಕು ಪಂಚಾಯಿತಿ ಎಚ್.ಹನು ಗ್ರಾಪಂ ಸದಸ್ಯ ಬೆಟ್ಟಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೈಕುಂಠಯ್ಯ, ಗಡಿ ಯಜಮಾನ ಹೆಜ್ಜುರಯ್ಯ, ವೆಂಕಟಪ್ಪ, ಪುಟ್ಟಹೆಜ್ಜುರಯ್ಯ, ಆಟೋ ರಮೇಶ್, ಸೀನಾ, ನಾಗರಾಜು, ಸುರೇಶ, ಜವರಯ್ಯ, ಶ್ರೀನಿವಾಸ , ಮಹೇಶ ,ಸ್ವಾಮಿ, ಸುಂದರ, ಗೋವಿಂದಯ್ಯ ,ನಾಗೇಂದ್ರ, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ