ಔರಾದ್: ಬೀದರ ಜಿಲ್ಲಾ ಔರಾದ್ ಪಟ್ಟಣದ ಜನತಾ ಕಾಲೋನಿ ನಿವಾಸಿ ರವಿ (ತಂದೆ ಸುಮಂತ್ ವರ್ಮ)ರವರ ಮನೆಯಲ್ಲಿ ಮಧ್ಯ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಮನೆಯಲ್ಲಿನ ಸಾಮಗ್ರಿಗಳು ಸುಟ್ಟು ಹೋಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಈ ವಿಷಯ ತಿಳಿದು ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಧಾಕರ ಕೊಳ್ಳುರ ಅವರು ರವಿ ವರ್ಮ ರವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಔರಾದ ತಹಶೀಲ್ದಾರ್ ಅವರಿಗೆ ದೂರವಾಣಿ ಕರೆ ಮಾಡಿ, ಘಟನೆಯ ಮಾಹಿತಿ ನೀಡಿದರಲ್ಲದೇ ಕುಟುಂಬಕ್ಕೆ ಪರಿಹಾರ ನೀಡುವಂತೆ ತಾಲೂಕು ಆಡಳಿತವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಂಕು ನಿಷ್ಪತೆ, ಗಣೇಶ್ ಮಡಿವಾಳ, ವಿಜಯ್ ಕುಮಾರ್ ಒಡೆಯರ್, ಯಶೇಪ್ಪಾ ಮುಂತಾದರೂ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


