ಯಾದಗಿರಿ: ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಸೈಬರ್ ಕ್ರೈಮ್ ಪಿಎಸ್ ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು.
ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತಕ್ಕೊಳಗಾಗಿದ್ದಾರೆ. ಘಟನೆಯ ಬೆನ್ನಲ್ಲೇ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಶಾಸಕರ ಒತ್ತಡದಿಂದ ಹೃದಯಾಘಾತ ಸಂಭವಿಸಿದೆ ಎಂದು ಪರಶುರಾಮ್ ಪತ್ನಿ ಆರೋಪಿಸಿದ್ದಾರೆ.
ಪತಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಪರಶುರಾಮ್ ಪತ್ನಿ ಶ್ವೇತಾ ಪ್ರತಿಭಟನೆ ಮಾಡುತ್ತಿದ್ದಾರೆ. ಇವರು 8 ತಿಂಗಳ ಗರ್ಭಿಣಿಯಾಗಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಶ್ವೇತಾ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. 30/ 40 ಲಕ್ಷ ಹಣ ಕೇಳಿದ್ದಾರೆ. ಸಾಕಷ್ಟು ಭಾರೀ ಹಣ ಕೇಳ್ತಿರುವ ಬಗ್ಗೆ ನನಗೆ ಪತಿ ಹೇಳಿದ್ದಾರೆ. ಎಂಎಲ್ ಎ ಹಾಗೂ ಎಂಎಲ್ ಎ ಮಗ ಹಣ ಕೇಳಿದ್ದಾರೆ. ಅವರ ಇಬ್ಬರನ್ನೂ ಕರೆಸಿ ಅವರು ಅರೆಸ್ಟ್ ಮಾಡಬೇಕು ಎಂದು ಶ್ವೇತಾ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


