ಬೆಂಗಳೂರು: ಮೂಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ–ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ತಂತ್ರ ಹೆಣೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ತಮ್ಮ ನಿವಾಸದಲ್ಲಿಂದು ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಉಪಹಾರ ಕೂಟ ನಡೆಸಿ ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಿದರು.
ಬಿಜೆಪಿ –ಜೆಡಿಎಸ್ ಪಾದಯಾತ್ರೆಗೆ ಪ್ರತಿಯಾಗಿ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ. ಈಗಾಗಲೇ ಬಿಡದಿ, ರಾಮನಗರದಲ್ಲಿ ಎರಡು ದಿನ ಕಾಂಗ್ರೆಸ್ ಸಮಾವೇಶ ನಡೆದಿದೆ. ಆ.9 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಅದಕ್ಕೆ ಸುಮಾರು ಒಂದು ಲಕ್ಷ ಜನ ಸಮಾವೇಶಗೊಳ್ಳಬೇಕು. ಬಿಜೆಪಿ–ಜೆಡಿಎಸ್ನ ಪಾದಯಾತ್ರೆಗೆ ಪ್ರತಿಯಾಗಿ ಈ ಎರಡೂ ಪಕ್ಷಗಳ ನಾಯಕರ ಹಗರಣಗಳನ್ನು ಜನರ ಮುಂದಿಡಬೇಕು ಎಂಬ ಚರ್ಚೆಗಳಾಗಿವೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296