ಬೆಂಗಳೂರು: ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಯಾಕೆ ಬಂಧಿಸಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರೇ ಇದರ ಕಿಂಗ್‌ಪಿನ್. ಅವನನ್ನು ಏಕೆ ಬಂಧಿಸಿಲ್ಲ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.
ಮುಡಾದಲ್ಲಿ ಅಂದಾಜು ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದರ ಸೂತ್ರಧಾರ ಭೈರತಿ ಸುರೇಶ್. ಅವನು ಏಕೆ ಹೊರಗಡೆ ಇದ್ದ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸರ್ಕಾರ ಈತನನ್ನು ಏಕೆ ಬಂಧಿಸಿಲ್ಲ? ಎಂದು ಪ್ರಶ್ನೆ ಮಾಡಿದರು.
ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಒಬ್ಬ ಸಚಿವರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದರಲ್ಲಿ 189 ಕೋಟಿ ಹಗರಣ ಆಗಿದೆ. ಅದಕ್ಕಾಗಿ ಸಚಿವರ ರಾಜೀನಾಮೆ ಪಡೆದು ಅವರನ್ನು ಇ.ಡಿ ಬಂಧಿಸಿದೆ. ಹಾಗಾದರೆ ಭೈರತಿ ಸುರೇಶ್ ಯಾವ ಮುಖ ಇಟ್ಟುಕೊಂಡು ಸಚಿವರಾಗಿ ಮುಂದುವರೆದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


