ಬೆಂಗಳೂರು: ಮುಡಾ ಹಗರಣ ಕೆಣಕಿದ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಮುಂದಾಗಿದೆ.
ಸದ್ಯ ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ ವಿವಾದವನ್ನು ಕೈಗೆತ್ತಿಕೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತಿಮೆ ಸಿದ್ದಪಡಿಸಿದ ಗೋಡೌನ್ ನಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ.
ಕೆಂಗೇರಿ ಬಳಿಯ ಗೋಡೌನ್ ಗೆ ಭೇಟಿ ನೀಡಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಪರಿಶೀಲನೆ ನಡೆಸಿದೆ. ಮಹಜರು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳನ್ನ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


