ಬೆಂಗಳೂರು: ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದು, ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೇಂದ್ರ ವರಿಷ್ಟರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಇಲ್ಲವೇ ಶಿಸ್ತುಕ್ರಮ ಜರುಗಿಸಲು ವರಿಷ್ಟರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲೇ ಯತ್ನಾಳ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಹೇಳಿಕೆ ನೀಡಿದ್ದರು. ಇದು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಗೆ ಇರಿಸುಮುರುಸು ಉಂಟು ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಟಾರ್ಗೆಟ್ ಮಾಡಿ, ಸಾಕಷ್ಟು ಹೇಳಿಕೆಗಳನ್ನು ನೀಡಿದ್ದು, ಯತ್ನಾಳ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಳ್ಳುತ್ತಿದ್ದ, ಯತ್ನಾಳ್ ಹೇಳಿಕೆಗೆ ಸ್ಪಷ್ಟನೆ ನೀಡಿ ಎಂದು ಕಾಂಗ್ರೆಸ್ ನಾಯಕರು ಬಿಜೆಪಿಗೆ ತಿರುಗೇಟು ನೀಡುತ್ತಿದ್ದಾರೆ.
ಇದೀಗ ಯತ್ನಾಳ್ ಹೇಳೀಕೆಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ದೆಹಲಿ ಬಿಜೆಪಿ ನಾಯಕರು ಅವರ ಮೇಲೆ ಶಿಸ್ತು ಕ್ರಮ ಇಲ್ಲವೇ ಪಕ್ಷದಿಂದಲೇ ಉಚ್ಛಾಟನೆ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


