nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಿನಿಂದ ನಾಡಿಗೆ ಹುಲಿಯ ನಡಿಗೆ: ಸರಗೂರು ತಾಲ್ಲೂಕಿನಲ್ಲಿ ಭಯದ ವಾತಾವರಣ ಸೃಷ್ಟಿ
    ಜಿಲ್ಲಾ ಸುದ್ದಿ August 6, 2024

    ಕಾಡಿನಿಂದ ನಾಡಿಗೆ ಹುಲಿಯ ನಡಿಗೆ: ಸರಗೂರು ತಾಲ್ಲೂಕಿನಲ್ಲಿ ಭಯದ ವಾತಾವರಣ ಸೃಷ್ಟಿ

    By adminAugust 6, 2024No Comments2 Mins Read

    ಸರಗೂರು: ಇತ್ತೀಚೆಗೆ ಕಾಡಿನಿಂದ ನಾಡಿಗೆ ಬರುವ ಮೃಗಗಳ ಸಂಖ್ಯೆ ಹೆಚ್ಚುತ್ತಿದೆ. ಸರಗೂರು ತಾಲ್ಲೂಕಿಯಲ್ಲಂತೂ ವಿಪರೀತ ಭಯದ ವಾತಾವರಣ ನಿರ್ಮಾಣವಾಗಿದೆ. ನುಗು ಜಲಾಶಯದ ಹಿನ್ನೀರು ಬಳಿ ಇರುವ ಹೊಸ ಬಿರ್ವಾಳ್ ವಲಯದ ಅರಣ್ಯ ವ್ಯಾಪ್ತಿಯ ಹೊಸಹೆಗ್ಗುಡಿಲು ಗ್ರಾಮದಲ್ಲಿ ಶನಿವಾರದಂದು ಜಮೀನು ಒಂದರಲ್ಲಿ  ಹುಲಿ ಹೆಜ್ಜೆಯ ಗುರುತು ಕಾಣಿಸಿಕೊಂಡು ಪ್ರತ್ಯಕ್ಷವಾಗಿ ಆತಂಕ ನಿರ್ಮಿಸಿರುವ ಬೆನ್ನಲ್ಲೇ ಹೊಸಹೆಗ್ಗುಡಿಲು ಗ್ರಾಮದ ಜಮೀನಿನಲ್ಲಿ  ಹುಲಿಯೊಂದು ಹೆಜ್ಜೆ ಗುರುತು ಕಾಣಿಸಿಕೊಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

    ಹೆಡಿಯಾಲ ಮಾರ್ಗವಾಗಿ ಸರಗೂರು ತಾಲ್ಲೂಕಿನಗೆ ಮಧ್ಯೆ ರಸ್ತೆಯ ಬದಿಯಲ್ಲಿ ಇರುವ ಹೊಸಹೆಗ್ಗುಡಿಲು ಗ್ರಾಮದ ಸಿದ್ದರಾಜು ಎಂಬುವರ ಜಮೀನಲ್ಲಿ ಬಿರ್ವಾಳ್ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷವಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಜಮೀನಲ್ಲಿ ಕಾವಲು ಕಾಯುವ ಸಮಯದಲ್ಲಿ ರೈತರು ಒಬ್ಬರು ದಾಟುತ್ತಿದ್ದ ಹುಲಿಯ ದೃಶ್ಯ ಸೆರೆಯಾಗಿದೆ.


    Provided by
    Provided by

    ಈ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಚಿರತೆ ಮತ್ತು ಹುಲಿ ಹಾವಳಿಯಿಂದ ಈಗಾಗಲೇ ಭಯ ಹೆಚ್ಚಿದೆ. ಈಗ ಹುಲಿ ಪ್ರತ್ಯಕ್ಷವಾಗಿ ಆತಂಕವನ್ನ ಇನ್ನಷ್ಟು ಹೆಚ್ಚಿಸಿದೆ. ಒಂದು ಕಡೆ ಚಿರತೆ ಹಾವಳಿ, ಇದೀಗ ಹುಲಿ ಪ್ರತ್ಯಕ್ಷವಾಗಿದೆ. ಈ ಹಿಂದೆ ಬಳ್ಳೂರುಹುಂಡಿ, ಹಾದನೂರು, ಹಾದನೂರುವಡೆಯನಪುರ, ಗ್ರಾಮದ ರೈತರೊಬ್ಬರ ಮೇಲೆ ಹುಲಿ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಅವರು ಕೆಲಕಾಲ ಚಿಕಿತ್ಸೆ ಪಡೆದು ಸುಧಾರಿಸಿಕೊಂಡಿದ್ದಾರೆ.

    ಹೆಡಿಯಾಲ ವಲಯದ ಭಾಗದಲ್ಲಿ ಚಿರತೆ, ಹುಲಿ ಹಾವಳಿ ಹೆಚ್ಚಾಗಿದ್ದು, ಗ್ರಾಮದ ಅನೇಕ ರೈತರ ಜಾನುವಾರುಗಳನ್ನ ಬಲಿ ತೆಗೆದುಕೊಳ್ಳುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ, ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಆದರೆ ಈವರೆಗೂ ಬೋನಿಗೆ ಚಿರತೆ, ಹುಲಿ ಸೆರೆ ಸಿಕ್ಕಿಲ್ಲ. ಹೀಗಾಗಿ ಜನ ಸಾಕಷ್ಟು ಭಯಗೊಂಡಿದ್ದಾರೆ. ಕಳೆದ ಒಂದು ಆರು ತಿಂಗಳಿಂದ ಚಿರತೆ, ಹುಲಿ ಕಾಟ ಹೆಚ್ಚಾದರು ಅರಣ್ಯ ಇಲಾಖೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥ ಹೊಸಹೆಗ್ಗುಡಿಲು ಗ್ರಾಮದ ವಾಲ್ಮೀಕಿ ಸಿದ್ದರಾಜು ಆಕ್ರೋಶ ವ್ಯಕ್ತಪಡಿಸಿದರು

    ಹೊಸಹೆಗ್ಗುಡಿಲು ಸೇರಿ ಸುತ್ತಮುತ್ತ ಹಳ್ಳಿಗಳಲ್ಲಿ ಸಿಕ್ಕಾಪಟ್ಟೆ ಟೆನ್ಷನ್ ಸೃಷ್ಟಿಯಾಗಿದೆ. ಜನರು ಮನೆಯಿಂದ ಹೊರಬರಲು ಹಾಗೂ ಜಮೀನುಗಳಿಗೆ ಹೋಗಲು  ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಹುಲಿ ಸೆರೆಗೆ ಆಗ್ರಹ ಮಾಡಿದ್ದಾರೆ. ಒಂದೇ ತಿಂಗಳ ಅವಧಿಯಲ್ಲಿ 2-3 ಬಾರಿ ಹುಲಿ ಕಾಣಿಸಿದ್ದು, ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

    ಕಳೆದ ತಿಂಗಳು ದನ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೆ ಹುಲಿ ಹಠಾತ್ ದಾಳಿ ನಡೆಸಿತ್ತು. ರೈತರ ಎಂಬುವವರ ಮೇಲೆ ಹುಲಿ ಹಠಾತ್ ದಾಳಿ ನಡೆದಿತ್ತು. ಈ ವೇಳೆ ಹತ್ತಿರದಲ್ಲಿದ್ದ ಇತರರು ನೆರವಿಗೆ ಬಂದು ರೈತನನ್ನು ಪ್ರಾಣಾಪಾಯದಿಂದ ಪಾರು ಮಾಡಿದರು. ತೀವ್ರ ಗಾಯಗೊಂಡಿದ್ದ ದಾಸಯ್ಯನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಪತ್ತೆಗೆ ಗಸ್ತು ತಿರುಗಿದರು. ಇಷ್ಟಾದರು ಹುಲಿಯಾಗಲಿ ಚಿರತೆಯಾಗಲಿ ಸೆರೆ ಸಿಕ್ಕಿಲ್ಲ. ಇಷ್ಟದೇ ಅಲ್ಲದೇ ಹೊಸಹೆಗ್ಗುಡಿಲು ಹಾಗೂ ಬಿರ್ವಾಳ್ ಸುತ್ತಮುತ್ತ ಎಷ್ಟು ಚಿರತೆ ಮತ್ತು ಹುಲಿಗಳು ಸೇರಿಕೊಂಡಿವೆ ಎಂದು ಗ್ರಾಮಸ್ಥರು ಅರಣ್ಯ ಅಧೀಕಾರಿಗಳನ್ನ ಪ್ರಶ್ನೆ ಮಾಡಿದ್ದಾರೆ.ಇದರ ಬಗ್ಗೆ ಎಷ್ಟು ಹೇಳಿದರೂ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ವ್ಯಂಗ್ಯವಾಡಿದರು.ನಂತರ ನುಗು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡದ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕಳಿಸಿ ಹುಲಿ ಹೆಜ್ಜೆ ಗುರುತು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.ನುಗು ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ವಿವೇಕ್ ಪರಿಶೀಲನೆ ನಡೆಸಿ  ಬೋನು ಇಟ್ಟಲು ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.