ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರ ಮಾರಣಹೋಮವೇ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬಸ್ಥರ 29 ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಶೇಖ್ ಹಸೀನಾ ಭಾರತಕ್ಕೆ ಪರಾರಿಯಾದ ಬೆನ್ನಲೇ ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಅವಾನಿ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿವೆ.
ಸತ್ಕಿರಾ ಪ್ರದೇಶವೊಂದರಲ್ಲೇ ಅವಾನಿ ಪಕ್ಷದ 10 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ 5 ಮಂದಿ ಅಪ್ರಾಪ್ತರು ಎಂದು ಹೇಳಲಾಗಿದೆ.
ಅವಾನಿ ಪಕ್ಷದ ಮುಖಂಡರ ಮನೆ ಹಾಗೂ ಅಂಗೆಇಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಅಂಗಡಿಗಳನ್ನು ಪುಂಡರು ಲೂಟಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296