ಬೀದರ್: ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರೊಬ್ಬರು ವರ್ಗಾವಣೆಗೊಂಡ ಕಾರಣಕ್ಕೆ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
2013ರಿಂದ ವರ್ಷದಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲ್ ರೆಡ್ಡಿ ಅವರು ಬೀದರ್ ತಾಲೂಕಿನ ಬಗದಲ್ ಸರ್ಕಾರಿ ಪ್ರೌಢ ಶಾಲೆಗೆ ವರ್ಗಾವಣೆಯಾಗಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೆಚ್ಚಿನ ಶಿಕ್ಷಕ ಬೇರೆಡೆಗೆ ಹೋಗುತ್ತಿರುವುದರಿಂದ ಬೇಸರಗೊಂಡು ವಿದ್ಯಾರ್ಥಿಗಳು ಭಾವುಕರಾಗಿ ಒಲ್ಲದ ಮನಸ್ಸಿನಿಂದ ಕಳಿಸಿಕೊಟ್ಟರು. ದಯವಿಟ್ಟು ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗ್ಬೇಡಿ ಸರ್ ಎಂದು ಮಕ್ಕಳು ಅಳುತ್ತಾ ತಬ್ಬಿಕೊಂಡರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


