nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳೆ ವಿಮೆ ಇಂದ ರೈತರಿಗೆ ಆರ್ಥಿಕ ಹೊರೆ ತಪ್ಪುತ್ತದೆ: ಜನಸ್ಪಂದನ ಕಾರ್ಯಕ್ರಮದಲ್ಲಿ ರಾಜೇಂದ್ರ ರಾಜಣ್ಣ
    ಮಧುಗಿರಿ August 8, 2024

    ಬೆಳೆ ವಿಮೆ ಇಂದ ರೈತರಿಗೆ ಆರ್ಥಿಕ ಹೊರೆ ತಪ್ಪುತ್ತದೆ: ಜನಸ್ಪಂದನ ಕಾರ್ಯಕ್ರಮದಲ್ಲಿ ರಾಜೇಂದ್ರ ರಾಜಣ್ಣ

    By adminAugust 8, 2024No Comments2 Mins Read
    madugeri

    ಮಧುಗಿರಿ: ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಅರ್ಜಿ ಹಿಡಿದು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ಬರುವುದನ್ನು ತಪ್ಪಿಸಲು ಸರ್ಕಾರ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.

    ತಾಲೂಕಿನ ನೇರಳೆ ಕೆರೆ ಗ್ರಾಮದ ಶ್ರೀರಂಗನಾಥ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮಮಟ್ಟದಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು,ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದು, ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು.

    ಪಾವತಿ ಖಾತೆಗಳನ್ನು ಬದಲಾವಣೆ ಮಾಡಿಸಿಕೊಳ್ಳುವ ಮೂಲಕ ಸಮಸ್ಯೆಗಳಿಂದ ಮುಕ್ತರಾಗಬೇಕು, ರೈತರು ಬೆಳೆ ವಿಮೆ ಮಾಡಿಸಿಕೊಳ್ಳು ವುದರಿಂದ ಆರ್ಥಿಕವಾಗಿ ಹೊರೆಯಾಗುವುದರಿಂದ ತಪ್ಪಿಸಿಕೊಳ್ಳಬಹುದು ಎಂದರು. ಕೆ. ಎನ್. ರಾಜಣ್ಣನವರು ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳನ್ನು ತಂದಿದ್ದು, ತಾಲೂಕಿನ ವಸತಿ ರೈತರಿಗೆ ಹಂತ ಹಂತವಾಗಿ ವಿತರಿಸಲಾಗುವುದು. ಯಾವುದೇ ಪಕ್ಷದವರು ಇರಲಿ ಬಡವರನ್ನು ಗುರುತಿಸಿ ಮನೆಗಳನ್ನು ಹಂಚುವಂತೆ ಪಂಚಾಯತಿ ಅಧ್ಯಕ್ಷ — ಪಿ ಡಿ ಓ ಗಳಿಗೆ ಸೂಚಿಸಿದರು.

    ಆಶ್ರಯ ಮನೆಗಳಿಗೆ ನಿವೇಶನ ನೀಡಿದಾಗ ರಸ್ತೆ ಇರಬೇಕು. ರುದ್ರ ಭೂಮಿಗಳಿಗೆ ಹೋಗಲು ರಸ್ತೆ ಇಲ್ಲದಿದ್ದರೆ ಅಧಿಕಾರಿಗಳು ಕಾಲುದಾರಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು. ಗ್ರಾಮಗಳಲ್ಲಿ ಅಂಗನವಾಡಿ, ಶಾಲಾ ಕಟ್ಟಡ ದುರಸ್ತಿ ಕಾರ್ಯ, ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಕೊಡಿಸಲಾಗುವುದು ಎಂದರು.

    ಇಡೀ ಜಿಲ್ಲೆಯಲ್ಲಿಯೇ ಮಧುಗಿರಿ ತಾಲೂಕಿನಲ್ಲಿ ನಾಲ್ಕು ಕಡೆ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಶೇಕಡ 60ರಷ್ಟು ಕಾರ್ಯರೂಪಕ್ಕೆ ತಂದಿದ್ದೇವೆ ಎಂದರು. ಇಲ್ಲಿರುವ ವಿವಿಧ ಇಲಾಖೆಗಳ ಮಳಿಗೆ ಗಳಿಗೆ ಭೇಟಿ ನೀಡಿದರೆ ಅಧಿಕಾರಿಗಳು ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸವಲತ್ತುಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

    ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ಸಚಿವರ ಸೂಚನೆಯಂತೆ ಈಗಾಗಲೇ ನಾಲ್ಕು ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಗ್ರಾಮಮಟ್ಟದ ಸಾರ್ವಜನಿಕರ ಸಮಸ್ಯೆಗಳ ಬಗೆಹರಿದಾಗ ಕಾರ್ಯಕ್ರಮ ಸಾರ್ಥಕತೆ ಪಡೆಯುತ್ತದೆ ಎಂದರು.

    ತಹಶೀಲ್ದಾರ್ ಸಿಗಬತುಲ್ಲಾ, ತಾ. ಪಂ. ಇ ಒ. ಬಿ. ಎಸ್. ಲಕ್ಷ್ಮಣ್, ಬಿ ಇ ಓ. ಕೆ. ಎನ್. ಹನುಮಂತರಾಯಪ್ಪ, ಎ. ಇ. ಇ. ರಂಗನಾಥ್, ದಯಾನಂದ್, ಜಿಪಂ ಮಾಜಿ ಅಧ್ಯಕ್ಷ ಜಿ. ಜೆ. ರಾಜಣ್ಣ, ಮುಖಂಡರಾದ ಎಂ. ಎಸ್. ಮಲ್ಲಿಕಾರ್ಜುನಯ್ಯ, ಸಿದ್ದಾಪುರ ರಂಗಶಾಮಣ್ಣ, ಡಿ. ಎಚ್. ನಾಗರಾಜು, ರಮೇಶ್ ಕನಕದಾಸ, ಕೆಂಚಣ್ಣ, ನೇರಳೆ ಕೆರೆ ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಗ್ರಾಪಂ ಅಧ್ಯಕ್ಷ ಇಂದ್ರ ಕುಮಾರ್, ಉಪಾ ಧ್ಯಕ್ಷೆ ಆರ್. ಪರಿಮಳ, ಪಿಡಿಓ ರಜನಿ, ಆರ್. ಐ. ಚಿಕ್ಕರಾಜು, ಶಿಕ್ಷಣ ಇಲಾಖೆಯ ಎಚ್. ಚಿತ್ತಯ್ಯ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು . ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಾಗೂ 56 ಜನರಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ…

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.