ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ ಹಾಗೂ ಸಿಬ್ಬಂದಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆಯನ್ನು ಬಡಿಸಿ, ಪ್ರಾರ್ಥನೆ ಮಾಡಿಸಿ ವಿಡಿಯೋ ಮಾಡಿಸಿಕೊಂಡ ಬಳಿಕ ಕೈಯಿಂದ ಮೊಟ್ಟೆಯನ್ನು ಕಿತ್ತುಕೊಂಡ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮಕ್ಕಳ ಕೈಯಿಂದ ಅಂಗನವಾಡಿ ಸಿಬ್ಬಂದಿ ಮೊಟ್ಟೆಯನ್ನು ಕಿತ್ತುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗುಂಡೂರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.
ಮಕ್ಕಳು ಆಸೆಯಿಂದ ಮೊಟ್ಟೆ ತಿನ್ನಲು ತಟ್ಟೆಗೆ ಕೈ ಹಾಕಿದಾಗ ಅಡುಗೆ ಸಿಬ್ಬಂದಿ ಮಕ್ಕಳ ಕೈಯಿಂದ ಮೊಟ್ಟೆ ಕಸಿದುಕೊಳ್ಳುತ್ತಿದ್ದಾರೆ. ಈ ವೇಳೆ ಮಕ್ಕಳು ನಿರಾಸೆಯಿಂದ ನೋಡುತ್ತಿರುವ ದೃಶ್ಯ ಸಾರ್ವಜನಿಕರ ಮನಕರಗಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


