ಮೈಸೂರು: ನನ್ನ ವಿರುದ್ಧದ ಆರೋಪಗಳನ್ನು ಎದುರಿಸುತ್ತೇನೆ, ರಾಜಕೀಯ ಹಾಗೂ ಕಾನೂನಿನ ಮೂಲಕ ಪ್ರತ್ಯುತ್ತರ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶನಿವಾರ ತಮ್ಮ ನಿವಾಸದ ಬಳಿ ಪತ್ರಕರ್ತರ ಜೊತೆಗೆ ಅವರು ಮಾತನಾಡಿದರು. ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಗಳನ್ನು ಜನರ ಮುಂದೆ ಇಡುತ್ತೇನೆ ಎಂದು ಅವರು ತಿಳಿಸಿದರು.
ವಿಜಯೇಂದ್ರ, ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಕೆಲವು ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಮಾತನಾಡುತ್ತೇನೆ. ಇನ್ನೂ ಕೆಲವು ಹಗರಣಗಳು ಬಾಕಿ ಇವೆ ಎಂದು ಸಿಎಂ ಹೇಳಿದರು.
ಬಿಜೆಪಿ- ಜೆಡಿಎಸ್‌ನವರು ಪಾದಯಾತ್ರೆ ಮಾಡಿದ್ದಕ್ಕೆ ನಾವು ಜನಾಂದೋಲನ ಸಮಾವೇಶ ಮಾಡಿದೆವು. ಅವರು ಮಾಡುತ್ತಿರುವ ಆರೋಪ ಸುಳ್ಳು ಎಂದು ತಿಳಿಸಲು ಜನಾಂದೋಲನ ಸಮಾವೇಶ ನಡೆಸಿದೆವು. ನನಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಪಡುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


