ವಯನಾಡ್: ಭೀಕರ ಭೂಕುಸಿತದಿಂದ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಜನ ನೆಲೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿಗೆ ಶನಿವಾರ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದರು.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ, ದುರಂತ ಸ್ಥಳವಾದ ಚೂರಲ್ ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಮೀಕ್ಷೆ ವೇಳೆ ಪ್ರಧಾನಿ ಅವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಜೆಪಿ ಸಂಸದ ಸುರೇಶ್ ಗೋಪಿ ಇದ್ದರು.
ವೈಮಾನಿಕ ಸಮೀಕ್ಷೆ ನಂತರ ಕಲ್ಪೆಟ್ಟಾದಲ್ಲಿರುವ ಎಸ್ ಕೆಎಂಜೆ ಹೈಯರ್ ಸೆಕೆಂಡರಿ ಶಾಲೆ ಸಮೀಪ ಹೆಲಿಕಾಪ್ಟರ್ ಬಂದಿಳಿಯಲಿದ್ದು, ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪೀಡಿತ ಪ್ರದೇಶಗಳಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296