ನವದೆಹಲಿ: ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಹನ್ನೊಂದು ಬಾಂಗ್ಲಾದೇಶಿ ಪ್ರಜೆಗಳ ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ BSF ಭಾನುವಾರ ತಿಳಿಸಿದೆ.
ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮೇಘಾಲಯದ ಅಂತರರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ನುಸುಳುಕೋರರು ಯತ್ನಿಸಿದ್ದರು. ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.
ಭಾರತಕ್ಕೆ ನುಸುಳುತ್ತಿದ್ದ 11 ಬಾಂಗ್ಲಾದೇಶಿ ಪ್ರಜೆಗಳನ್ನು ಗಡಿಯಲ್ಲಿ ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾ ಗಡಿಯಿಂದ ತಲಾ ಇಬ್ಬರನ್ನು ಬಂಧಿಸಲಾಗಿದ್ದು, ಮೇಘಾಲಯ ಗಡಿಯಿಂದ ಏಳು ಮಂದಿಯನ್ನು ಬಂಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296