ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 35 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ ಬಿ.ಐ.ಮೊಹಮ್ಮದ್ ರಫೀಕ್ ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ‌್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್ ಅಬ್ದುಲ್ ಗಫಾರ್ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ವಂಚನೆ ಎಸಗಿದ ಆರೋಪಿಗಳಾಗಿದ್ದಾರೆ.
ಈ ಮೂವರು ರಫೀಕ್ ಗೆ ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ 35 ಲಕ್ಷ ರೂ. ಪಡೆದು, ಅಂಗಡಿ ಕೊಡಿಸದೇ, ಪಡೆದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


