ತುಮಕೂರು: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೊಳೆಗೇರಿ ಪ್ರದೇಶ ನಿವಾಸಿಗಳ ಪುನರ್ವಸತಿ ಯೋಜನೆಯಡಿಯಲ್ಲಿ ಮಾರಿಯಮ್ಮನಗರದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಉದ್ಘಾಟಿಸಲಾಯಿತು.
ಇದೇ ವೇಳೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಒಳಪಡುವ ಮತ್ತೊಂದು ಕಟ್ಟಡವಾದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ನೂತನ ಸಭಾಂಗಣ, ಪ್ರಯೋಗಾಲಯ ಹಾಗೂ ಗ್ರಂಥಾಲಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜಿ.ಸಿ.ಮಾಧುಸ್ವಾಮಿ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಭೈರತಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ಶಾಸಕರಾದ ಬಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy