ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ನಟ ದರ್ಶನ್ ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ.
ವರದಿಗಳ ಪ್ರಕಾರ, ಇಂದು ಅಥವಾ ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಆಶೀರ್ವಾದ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಲುಕಿದ್ದಾರೆ. ಮದುವೆಯ ದಿನ ತರುಣ್ ಸುಧೀರ್ ಮತ್ತು ನಟಿ ಸೋನಲ್ ದರ್ಶನ್ ಅವರ ಅನುಪಸ್ಥಿತಿಯನ್ನು ನೆನೆದು ಭಾವುಕರಾಗಿದ್ದರು.
ತರುಣ್ ಸುಧೀರ್ ಮತ್ತು ನಟಿ ಸೋನಲ್ ಜೋಡಿ ಒಂದಾಗಲು ನಟ ದರ್ಶನ್ ಅವರು ಕಾರಣರಾಗಿದ್ದರು. ಹೀಗಾಗಿ ಮೊದಲ ಆಮಂತ್ರಣ ಪತ್ರಿಕೆ ನಟ ದರ್ಶನ್ ಅವರಿಗೆ ನೀಡಲಾಗಿತ್ತು. ಇದೀಗ ಪರಪ್ಪನ ಅಗ್ರಹಾರಕ್ಕೆ ತೆರಳಿ ಆಶೀರ್ವಾದ ಪಡೆಯಲು ಜೋಡಿ ಮುಂದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


