nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಾಯೋಗಿಕ ನಾಟಕ ನಿರ್ದೇಶಕನಿಗೆ ಸವಾಲಿನ ಕೆಲಸ: ಕಲಾಶ್ರೀ ಡಾ.ಲಕ್ಷ್ಮಣದಾಸ್
    ತುಮಕೂರು August 12, 2024

    ಪ್ರಾಯೋಗಿಕ ನಾಟಕ ನಿರ್ದೇಶಕನಿಗೆ ಸವಾಲಿನ ಕೆಲಸ: ಕಲಾಶ್ರೀ ಡಾ.ಲಕ್ಷ್ಮಣದಾಸ್

    By adminAugust 12, 2024No Comments2 Mins Read
    lakshman das

    ತುಮಕೂರು: ಪ್ರಾಯೋಗಿಕ ನಾಟಕಗಳನ್ನು ಪೇಕ್ಷಕರ ಮಂದೆ ಕಟ್ಟಿಕೊಡುವುದು ನಿರ್ದೇಶಕನಿಗೆ ಸವಾಲಿನ ಕೆಲಸ. ಸಾಮಾಜಿಕ, ಅದರಲ್ಲಿಯೂ ಪ್ರಾಯೋಗಿಕ ನಾಟಕಗಳಲ್ಲಿ ಸಂಭಾಷಣೆ, ಅಭಿನಯ, ಕಲಾವಿದರ ಭಾವಾಭಿನಯ ಎಲ್ಲವೂ ಒಟ್ಟಿಗೆ ಕೂಡಿದರೆ ಮಾತ್ರ ಪ್ರೇಕ್ಷಕರನ್ನು ಹಿಡಿದಿಡಲು ಸಾಧ್ಯ ಕಲಾಶ್ರೀ ಡಾ.ಲಕ್ಷ್ಮಣದಾಸ್ ಅಭಿಪ್ರಾಯಪಟ್ಟಿದ್ದಾರೆ

    ನಗರದ ಕನ್ನಡ ಭವನದಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ), ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಹಿತಿ ಪ್ರೊ.ಹೆಚ್.ಎಸ್.ವೆಂಕಟೇಶಮೂರ್ತಿ ಅವರ ಕುಣಿ ಕುಣಿ ನವಿಲೆ ನಾಟಕವನ್ನು ಸಮ್ಮತ ಥಿಯೇಟರ್ ನ ಯಶವಂತ ಡಿ.ನಿರ್ದೇಶಿಸಿದ್ದು, ರಂಗ ನಿರ್ವಹಣೆ ಸುನಿಲ್ ಚೇತನ್ ಅವರದ್ದು, ನವೀನ್ ಭೂಮಿ ನಿನಾಸಂ ಅವರ ಬೆಳಕಿನ ವಿನ್ಯಾಸ ಮಾಡಿದ್ದು, ಪ್ರಸಾದನ ಹಂಸ ಪ್ರಿಯ, ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಪೌರಾಣಿಕ ನಾಟಕಗಳಲ್ಲಿ ಪದ್ಯ, ಕಂದ ಪದ್ಯಗಳ ಮೂಲಕ ಹೇಗೋ ನಾಟಕವನ್ನು ತೂಗಿಸಬಹುದು. ಆದರೆ ಸಾಮಾಜಿಕ ನಾಟಕಗಳಲ್ಲಿ ಕಥಾವಸ್ತುವೇ ಪ್ರಧಾನವಾಗಿರುವ ಕಾರಣ. ಕಲಾವಿದರು ಭಾವ ತುಂಬಿ ಅಭಿನಯಿಸಿದಾಗ ಮಾತ್ರ ಪ್ರೇಕ್ಷಕರಿಂದ ಚಪ್ಪಾಳೆ ಗೌರವ ಸಿಗಲು ಸಾಧ್ಯ ಎಂದರು.


    Provided by
    Provided by

    ಶಿವಕುಮಾರ್ ತಿಮ್ಮಲಾಪುರ ಅವರ ನೇತೃತ್ವದ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ ಪ್ರಾಯೋಗಿಕ ನಾಟಕಗಳಿಗೆ ಹೆಸರಾದ ಸಂಸ್ಥೆ,ಹೊಸ ಹೊಸ ನಾಟಕಗಳನ್ನು ಈ ಭಾಗದ ಪ್ರೇಕ್ಷಕವರ್ಗಕ್ಕೆ ಪರಿಚಯಿಸಿದವರು. ಹಾಗೆಯೇ ಹೊಸ ಕಲಾವಿದರನ್ನು ರಂಗಭೂಮಿಗೆ ನೀಡಿದ ಕೊಡುಗೆ ಇವರಿಗೆ ಸಲ್ಲುತ್ತದೆ. ಇವರಿಗೆ ಸಾಥ ನೀಡುತ್ತಿರುವ ಕಾಂತರಾಜು ಕೌತುಮಾರನಹಳ್ಳಿ ಓರ್ವ ಉದ್ಯೋನ್ಮುಖ ನಿರ್ದೇಶಕ. ಇಂದಿನ ನಾಟಕದ ಸೀನರಿಗಳು ಗಮನಿಸಿದರೆ, ಇವರ ಕ್ರಿಯಾಶೀಲತೆ ನಮ್ಮ ಕಣ್ಣುಮುಂದೆ ಬರುತ್ತದೆ. ಇವರ ಈ ಕಲಾಸೇವೆ ಮತ್ತಷ್ಟು ಪಸರಿಸಲಿ ಎಂದು ಡಾ.ಲಕ್ಷ್ಮಣದಾಸ್ ಶುಭ ಹಾರೈಸಿದರು.

    ಮಾರುತಿ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಮುರುಳೀಧರ್ ಮಾತನಾಡಿ, ಕಳೆದ ಮರ‍್ನಾಲ್ಕು ವರ್ಷಗಳಿಂದ ಸಂಸ್ಥೆಯ ಸಂಪರ್ಕದಲ್ಲಿರುವ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದ ಗೆಳೆಯರು, ನಮ್ಮ ಶಾಲೆಯ ಮಕ್ಕಳಿಗೆ ನಾಟಕ ಮತ್ತಿತರರ ಲಲಿತ ಕಲೆಗಳ ತರಬೇತಿ ನೀಡುವ ಮೂಲಕ ಮಕ್ಕಳಲ್ಲಿ ಭಾಷಾ ಪ್ರಜ್ಞೆ, ವ್ಯಾಕರಣ ಬದ್ದ ಉಚ್ಚಾರಣೆ, ವಿಷಯ ಗ್ರಹಿಸುವ ವಿಧಾನ ಉದ್ದಿಪನಗೊಳ್ಳಲು ಹಾಗೂ ಸ್ಟೇಜ್ ಫೀಯರ್ ಹೋಗಲಾಡಿಸಲು ಸಹಕಾರಿಯಾಗಿದ್ದಾರೆ.ಇವರ ಪ್ರಯತ್ನ ನಿರೀಕ್ಷಿತ ಯಶಸ್ಸು ದೊರೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

    ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಕಾವ್ಯೇಸು ನಾಟಕಂ ರಮ್ಯಂ ಎಂಬ ಮಾತಿದೆ. ಲಲಿತ ಕಲೆಗಳಲ್ಲಿಯೇ ನಾಟಕಕ್ಕೆ ಮಹತ್ವದ ಸ್ಥಾನವಿದೆ. ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ, ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ ಮಕ್ಕಳಿಗೆ ತರಬೇತಿ ನೀಡಿ, ಅವರಿಂದ ನಾಟಕ ಪ್ರದರ್ಶನಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ. ನಾಟಕಗಳನ್ನು ಯಾರು ಉಳಿಸಬೇಕೋ, ಅವರನ್ನು ಗುರುತಿಸಿ, ರಂಗಕ್ಕೆ ಕರೆತಂದಿದ್ದಾರೆ. ಕುಣಿ ಕುಣಿ ನವಿಲೆ ನಾಟಕದ ಪಾತ್ರದಾರಿಗಳು ಈ ಕ್ಷಣವನ್ನು ಅವರ ಜೀವಿತದ ಕೊನೆಯವರೆಗೂ ಇರುತ್ತದೆ. ಕಾಂಕ್ರಿಟ್ ಕಾಡುಗಳಿಂದ ಪ್ರಾಣಿ ಪಕ್ಷಿ ಸಂಕುಲಕ್ಕೆ ದೊಡ್ಡ ಸವಾಲನ್ನು ಮನುಷ್ಯ ಹಾಕಿದ್ದಾನೆ. ಇದನ್ನು ಮಕ್ಕಳ ಮೂಲಕ ಹೇಳಲು ಹೊರಟಿದ್ದಾರೆ. ಕೃತಕ ಬುದ್ದಿಮತ್ತೆಯ ತಂತ್ರಜ್ಞಾನದ ಮೂಲಕ ಇಡೀ ಪ್ರಕೃತಿಗೆ ಸವಾಲಾಗಿದ್ದೇವೆ.ಸಹಜವಾದ ಮನುಷ್ಯತ್ವ, ಮಾನವೀಯತೆ ಬೆಳೆಯಬೇಕಾದರೆ ನಾವು ನಾಟಕಗಳನ್ನು ಹೆಚ್ಚು ಹೆಚ್ಚಾಗಿ ನೋಡುವುದು, ಪಾತ್ರಧಾರಿಗಳಾಗಿ ಅಭಿನಯಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

    ಮಾರುತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ಸುಷ್ಮಾ ಎನ್.ಶರ್ಮ ಮಾತನಾಡಿ, ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ ಕಳೆದ ೮ ತಿಂಗಳಿನಿಂದ ನಮ್ಮ ಮಕ್ಕಳಿಗೆ ರಂಗ ತರಬೇತಿ ನೀಡಿ, ಕುಣಿ ಕುಣಿ ನವಿಲೆ ನಾಟಕ ಪ್ರದರ್ಶನಕ್ಕೆ ಅವರನ್ನು ಸಜ್ಜುಗೊಳಿಸಿದ್ದಾರೆ.ಇದಕ್ಕೆ ಮಕ್ಕಳ ಪೋಷಕರ ಸಹಕಾರವೂ ಇದೆ.ನಮ್ಮ ಮಕ್ಕಳನ್ನು ನಿಮ್ಮನ್ನು ರಂಜಿಸಲಿದ್ದಾರೆ ಎಂಬ ನಂಬಿಕೆ ನಮ್ಮದು ಎಂದರು.

    ಮಾರುತಿ ವಿದ್ಯಾಕೇಂದ್ರದ ಮಕ್ಕಳಿಗೆ ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿ ಅವರು ರಚಿಸಿರುವ ಕುಣಿ ಕುಣಿ ನವಿಲೆ ನಾಟಕ ಪ್ರದರ್ಶನಗೊಂಡಿತು. ಈ ವೇಳೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ)ದ ಶಿವಕುಮಾರ್ ತಿಮ್ಮಲಾಪುರ, ಕಾಂತರಾಜು ಕೌತುಮಾರನಹಳ್ಳಿ, ರಂಗಸೊಗಡು ಕಲಾಟ್ರಸ್ಟ್ ನ ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.