nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಪಘಾತಗಳು ಹೆಚ್ಚಿದಲ್ಲಿ ಅಧಿಕಾರಿಗಳ ಮೇಲೆ ಕ್ರಮ : ಶುಭ ಕಲ್ಯಾಣ್
    Uncategorized August 12, 2024

    ರಸ್ತೆ ಅಪಘಾತಗಳು ಹೆಚ್ಚಿದಲ್ಲಿ ಅಧಿಕಾರಿಗಳ ಮೇಲೆ ಕ್ರಮ : ಶುಭ ಕಲ್ಯಾಣ್

    By adminAugust 12, 2024No Comments2 Mins Read
    shubha kalyan

    Provided by
    Provided by

    ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಚ್ಚರಿಕೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳಲ್ಲಿ ಒಟ್ಟು ೪೧ ಅಪಘಾತ ಸ್ಥಳಗಳನ್ನು ಗುರುತಿಸಲಾಗಿದೆ. ಅಪಘಾತ ಸ್ಥಳಗಳಲ್ಲಿ ಎಚ್ಚರಿಕೆ–ಸೂಚನಾ ಫಲಕಗಳು, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕಗಳನ್ನು ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ನಂತರ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸದ ಕಾರಣ ಹಾಗೂ ವಾಹನ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿಸಿದರು.
    ರಾಜ್ಯದ ವಿವಿಧ ಜಿಲ್ಲೆಯ ಸಾರಿಗೆಗಳು ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಮಾರ್ಗವಾಗಿ ಹೋಗುವುದರಿಂದ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಸರ್ವಿಸ್ ರಸ್ತೆ ಮತ್ತು ಮಾರ್ಗ ಸೂಚಿಗಳನ್ನು ಅಳವಡಿಸಿ ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

    ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಅಶ್ವಿಜ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಅಪಘಾತ ಸ್ಥಳಗಳು:

    ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ೪೮ರ ಕ್ಯಾತ್ಸಂದ್ರ ವ್ಯಾಪ್ತಿ ಚಿಕ್ಕಹಳ್ಳಿ, ಹಿರೇಹಳ್ಳಿ, ಪಂಡಿತನಹಳ್ಳಿ ಗೇಟ್, ಮಂಚಲಕುಪ್ಪೆ ವೃತ್ತ, ತುಮಕೂರು ಗ್ರಾಮಾಂತರ ವ್ಯಾಪ್ತಿ ಊರುಕೆರೆ ಜೈನ್ ಪಬ್ಲಿಕ್ ಸ್ಕೂಲ್, ಕೋರಾ ವ್ಯಾಪ್ತಿ ಅಜ್ಜಗೊಂಡನಹಳ್ಳಿ ವೃತ್ತ, ನೆಲಹಾಳ್ ವೃತ್ತ, ಕಳ್ಳಂಬೆಳ್ಳ ವ್ಯಾಪ್ತಿ ಜೋಗಿ ಹಳ್ಳಿ, ದೊಡ್ಡ ಆಲದ ಮರ, ಬಾಲೇನಹಳ್ಳಿ ಗೇಟ್, ಶಿರಾ ವ್ಯಾಪ್ತಿ ಶಿವಾಜಿ ನಗರ, ಮಾನಂಗಿ ತಾಂಡಾ ಗೇಟ್, ತಾವರೆಕೆರೆ ವ್ಯಾಪ್ತಿ ದ್ವಾರಾಳು ಬ್ರಿಡ್ಜ್, ತಾವರೆಕೆರೆ; ರಾಷ್ಟ್ರೀಯ ಹೆದ್ದಾರಿ ೭೩ರ ತುಮಕೂರು ಗ್ರಾಮಾಂತರ ವ್ಯಾಪ್ತಿ ಹೆಗ್ಗೆರೆ ಬಸ್ ನಿಲ್ದಾಣ, ತಿಪಟೂರು ಪಟ್ಟಣ ವ್ಯಾಪ್ತಿ ಬಂಡಿಹಳ್ಳಿ ಗೇಟ್-ರೇಣುಕಾ ಡಾಬ; ರಾಷ್ಟ್ರೀಯ ಹೆದ್ದಾರಿ ೭೫ರ ಕುಣಿಗಲ್ ವ್ಯಾಪ್ತಿ ಅಂಚೆಪಾಳ್ಯ ಸರ್ಕಲ್, ಬೇಗೂರು ಸೇತುವೆ, ಹೇರೂರು ಸೇತುವೆ, ಉರ್ಕೇಹಳ್ಳಿ, ಅಮೃತೂರು ವ್ಯಾಪ್ತಿ ನಾಗೇಗೌಡನಪಾಳ್ಯ ಗೇಟ್, ತಿಪ್ಪೂರು ಗೇಟ್, ಮಾಗಡಿ ಪಾಳ್ಯ ಗೇಟ್, ಹೇಮಾವತಿ ಕ್ರಾಸ್, ಚಾಕೇನಹಳ್ಳಿ; ರಾಷ್ಟ್ರೀಯ ಹೆದ್ದಾರಿ ೧೫೦(ಎ)ರ ತುರುವೇಕೆರೆ ವ್ಯಾಪ್ತಿ ಜೋಡಗಟ್ಟೆ; ರಾಜ್ಯ ಹೆದ್ದಾರಿ ೩೩ರ ಹುಲಿಯೂರು ದುರ್ಗ ವ್ಯಾಪ್ತಿ ಬಿ.ಹೊಸಹಳ್ಳಿ-ಡಿ.ಹೊಸಹಳ್ಳಿ ಗೊಲ್ಲರಹಟ್ಟಿ, ಕೊಡವಂತಿ ಜಂಕ್ಷನ್, ಹಳೆವೂರು ಜಂಕ್ಷನ್, ಐಬಿ ಸರ್ಕಲ್, ಕುಣಿಗಲ್ ವ್ಯಾಪ್ತಿ ಕುರುಡಿಹಳ್ಳಿ, ಜಂಪೇನಹಳ್ಳಿ ಕ್ರಾಸ್, ಜಟ್ಟಿ ಅಗ್ರಹಾರ, ಥರಟಿ; ರಾಜ್ಯ ಹೆದ್ದಾರಿ ೩ರ ಮಧುಗಿರಿ ವ್ಯಾಪ್ತಿ ಕೆರೆಗಳ ಪಾಳ್ಯ ಬಸ್ ನಿಲ್ದಾಣದ ಸುತ್ತ ಮುತ್ತ, ಮಿಡಿಗೇಶಿ ವ್ಯಾಪ್ತಿ ಹೊಸಕೆರೆ, ಪಾವಗಡ ವ್ಯಾಪ್ತಿ ರಾಜವಂತಿ ಕೆರೆ, ನಾಗಲಮಡಿಕೆ ಕ್ರಾಸ್, ಪಳವಳ್ಳಿ ಕೆರೆ, ಕೊರಟಗೆರೆ ವ್ಯಾಪ್ತಿ ತುಂಬಾಡಿ, ಜಿ.ನಾಗೇನಹಳ್ಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.