ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ, ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ೬ ವೈಯಕ್ತಿಕ ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುವುದು.
ಆಸಕ್ತ ಹಿರಿಯ ನಾಗರಿಕರು/ಸಂಸ್ಥೆಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಂ.ಜಿ.ರಸ್ತೆ, ತುಮಕೂರು ಇವರಿಂದ ಅರ್ಜಿ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೩೧ರೊಳಗಾಗಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ವಾ. ಸಂಖ್ಯೆ: ೦೮೧೬-೨೨೭೦೦೨೯ನ್ನು ಸಂಪರ್ಕಿಸಿ ಪಡೆಯಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಚಿದಾನಂದ ಮೂರ್ತಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296