ತುಮಕೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ೨೦೨೪-೨೫ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೇವಾಸಿಂಧು ತಂತ್ರಾಂಶದ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ, ಅರಿವು–ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kssd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೮೦೫೦೭೭೦೦೦೪, ೮೦೫೦೭೭೦೦೦೫ ಅಥವಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ ೦೮೧೬-೨೦೦೫೦೦೮ನ್ನು ಸಂಪರ್ಕಿಸಬೇಕೆಂದು ನಿಗಮದ ಪಡೆದುಕೊಳ್ಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296