ಕರ್ನಾಟಕ ರಾಜ್ಯದಲ್ಲಿಂದ ನೆರೆಯ ಗೋವಾ ರಾಜ್ಯಕ್ಕೆ ರೈಲು ಸಂಚಾರ ಕಲ್ಪಿಸುವ ಮಾರ್ಗದಲ್ಲಿ ಗೂಡ್ಸ್ ರೈಲು ದೂಧ್ ಸಾಗರ ಬಳಿ ಹಳಿ ತಪ್ಪಿದೆ. ರೈಲು ಹಳಿಯಿಂದ ಗೂಡ್ಸ್ ರೈಲು ತೆರವು ಕಾರ್ಯಾಚರಣೆ ಕಾರ್ಯ ಮುಂದುವರೆದಿದ್ದು, ಇಂದು ಕೂಡ ಕರ್ನಾಟಕ – ಗೋವಾ ರೈಲು ಸಂಚಾರ ಇರುವುದಿಲ್ಲ ಎಂದು ನೈರುತ್ಯ ಇಲಾಖೆ ತಿಳಿಸಿದೆ.
ಧೂದ್ ಸಾಗರ್ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ದಿನಗಳಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕರ್ನಾಟಕ ಮತ್ತು ಗೋವಾ ನಡುವಿನ ಎಲ್ಲ ರೈಲುಗಳ ಸಂಚಾರ ಬಂದ್ ಆಗಿತ್ತು. ಇಂದು ಶಾಲಿಮಾರ್ – ವಾಸ್ಕೋ ಡ ಗಾಮಾ ರೈಲು ಹುಬ್ಬಳ್ಳಿಯಲ್ಲಿ ನಿಲುಗಡೆಯಾಗಿದ್ದು, ಹುಬ್ಬಳ್ಳಿಯಿಂದ ರೈಲು ಪ್ರಯಾಣಿಕರಿಗೆ ಪರ್ಯಾಯವಾಗಿ ಬಸ್ಸಿನಲ್ಲಿ ಹೋಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 1,200 ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ವಾಯುವ್ಯ ರಸ್ತೆ ಸಾರಿಗೆ ನಿಗಮದ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ 25 ಬಸ್‌ಗಳನ್ನು ವಿಶೇಷ ವ್ಯವಸ್ಥೆಯ ಮೂಲಕ ರೈಲು ಪ್ರಯಾಣಿಕರನ್ನು ಗೋವಾಗೆ ಕಳುಹಿಸಿ ಕೊಡಲಾಗಿದೆ. ಇನ್ನು ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್‌ನಲ್ಲಿ ಊಟ ಮತ್ತು ಕುಡಿಯುವ ನೀರಿಗೆ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನೈರುತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಂದ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹುಬ್ಬಳ್ಳಿಯಿಂದ ನೇರವಾಗಿ ಪಣಜಿ, ವಾಸ್ಕೋಡ ಗಾಮಾ, ಮಡಗಾಂವ್ ಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296