ತುಮಕೂರು: ಬಾಂಗ್ಲಾದೇಶದಲ್ಲಿ ಪ್ರಸ್ತುತ ಆರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದುಗಳ ಮೇಲೆ ಭಾರೀ ದೌರ್ಜನ್ಯ ನಡೆಯುತ್ತಿದೆ ಇದನ್ನು ತಪ್ಪಿಸಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಸಮಿತಿ ಕಾರ್ಯಕರ್ತರು ಬಾಂಗ್ಲಾದೇಶದಲ್ಲಿರುವ ಹಿಂದುಗಳ ವ್ಯಾಪಾರ ವಹಿವಾಟು ಮನೆಗಳು ಆಗುವ ಆಸ್ತಿಪಾಸ್ತಿಯ ಮೇಲೆ ದಾಳಿ ನಡೆಯುತ್ತಿದ್ದು, ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಡೆಗಟ್ಟುವ ನೈಟಿನಲ್ಲಿ ಹಾಗೂ ಅವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನಹರಿಸಬೇಕೆಂದು ಒತ್ತಾಯಿಸಿದರು.
ಮುಸ್ಲಿಂ ಫಂಡಮೆಂಟಲ್ ಗಳು ಅಶಾಂತಿಯಾವ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ಅದೇ ರೀತಿ ಬಾಂಗ್ಲಾದೇಶದಲ್ಲಿಯೂ ಕೂಡ ನಡೆಯುತ್ತಿದೆ ಎಂದು ಶಾಸಕ ಜ್ಯೋತಿ ಗಣೇಶ್ ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಿದ್ದಾರೆ ಎಂದು ಹೇಳಿದರು.
ಏನೋ ಭಾರತದಲ್ಲಿರುವ ಬುದ್ಧಿಜೀವಿಗಳು ಯಾಕೆ ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಹಿಂದುಗಳ ರಕ್ಷಣೆ ಕುರಿತು ಮಾತನಾಡುತ್ತಿಲ್ಲ ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296