nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ಮಹಿಳೆ ಸಹಿತ ಆರೋಪಿಗಳು ಅರೆಸ್ಟ್
    ಜಿಲ್ಲಾ ಸುದ್ದಿ August 13, 2024

    ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ಮಹಿಳೆ ಸಹಿತ ಆರೋಪಿಗಳು ಅರೆಸ್ಟ್

    By adminAugust 13, 2024No Comments2 Mins Read
    fraud marriage

    ತುಮಕೂರು : ಮದುವೆ ಹೆಸರಲ್ಲಿ ಅವಿವಾಹಿತರನ್ನೇ ಟಾರ್ಗೆಟ್‌ ಮಾಡ್ತಿದ್ದ  ತಂಡವನ್ನು ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ.

    ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ–ಚಿನ್ನದೊಂದಿಗೆ ಪರಾರಿಯಾಗುತ್ತಿದ್ದರು. ತುಮಕೂರು ಸೇರಿದ್ದಂತೆ ರಾಜ್ಯದ ಹಲವು ಕಡೆ ಹಲವರನ್ನ ಯಾಮಾರಿಸಿದ್ದ ತಂಡವಾಗಿದೆ.


    Provided by
    Provided by

    ಏನಿದು ಪ್ರಕರಣ?

    ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ನಡೆದ ದೋಖಾ ಮದುವೆ ಇದಾಗಿದೆ. ಪಾಲಾಕ್ಷ್ಯ ಎಂಬುವರು ಮಗನಿಗೆ ಮದುವೆ ಮಾಡಲು ಹರಸಾಹಸ ನಡೆಸಿದ್ದರು. ದಯಾನಂದಮೂರ್ತಿ ಗೆ 34 ವರ್ಷ ದಾಟಿದ್ರೂ ಹೆಣ್ಣು ಸಿಗದೆ ನೊಂದಿದ್ದರು. ಅನೇಕ ಕಡೆ ಹೆಣ್ಣು ಹುಡುಕಿದ್ರೂ  ಕಂಕಣ ಭಾಗ್ಯ ಕೂಡಿಬಂದಿರಲಿಲ್ಲ.

    ಹತ್ತಾರು ಮದುವೆ ಬ್ರೋಕರ್‌ ಗಳ ಮೂಲಕ ಹೆಣ್ಣು ಹುಡುಕಿಸಿದ್ದ ಪಾಲಾಕ್ಷ್ಯ, ಕುಷ್ಟಗಿ ಮೂಲದ ಬಸವರಾಜು ಮೂಲಕ ಲಕ್ಷ್ಮಿ ಎಂಬಾಕೆಯ ಪರಿಚಯವಾಗಿತ್ತು. ಮದುವೆ ಬ್ರೋಕರ್‌ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಬಳಿ ಮಗನಿಗೆ ಹೆಣ್ಣು ತೋರಿಸುವಂತೆ ಪಾಲಾಕ್ಷ್ಯ ಕೇಳಿಕೊಂಡಿದ್ದರು .

    ಇವರ ಪರಿಸ್ಥಿತಿ ನೋಡಿ ಮೋಸ ಮಾಡುವ ತೀರ್ಮಾನ ಮಾಡಿದ ಲಕ್ಷ್ಮೀ, ಹುಬ್ಬಳ್ಳಿಯಲ್ಲಿ ಒಬ್ಬ ಒಳ್ಳೆ ಹುಡುಗಿ ಇದ್ದಾಳೆ. ಆಕೆಗೆ ತಂದೆ–ತಾಯಿ ಇಲ್ಲ ನೀವೆ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿದ್ದಳು.

    ಕೋಮಲ ಎಂಬ ಹೆಸರಿನಲ್ಲಿ ಯುವತಿಯ ಪೋಟೋ ತೋರಿಸಿದ್ದ ಲಕ್ಷ್ಮಿ. ಗಂಡಿನ ಮನೆ ನೋಡಲು ಅತ್ತಿಕಟ್ಟೆ ಗ್ರಾಮಕ್ಕೆ ಬಂದಿದ್ದ ಯುವತಿ ಜೊತೆಗೆ ಚಿಕ್ಕಮ್ಮ–ಚಿಕ್ಕಪ್ಪ, ಕಳೆದ  ವರ್ಷ ನವೆಂಬರ್‌ 11 ನೇ ತಾರೀಕು ಅತ್ತಿಗಟ್ಟೆಗೆ ಬಂದಿದ್ದ ನಕಲಿ ಕುಟುಂಬವು  ಅಂದೆ ಮದುವೆ ಮಾತುಕತೆ ನಡೆಸಿತ್ತು.

    ಮರುದಿನವೇ ಮದುವೆ ಮಾಡಿ ಮುಗಿಸಿದ ಎರಡು ಕುಟುಂಬ, ಮಗನಿಗೆ ಹೆಣ್ಣು ಸಿಗದೆ ಹೈರಾಣಾಗಿದ್ದ ದಯಾನಂದ ಮೂರ್ತಿ ಕುಟುಂಬ ದಿಢೀರ್‌ ಮದುವೆ ಒಪ್ಪಿಕೊಂಡು ಗ್ರಾಮದಲ್ಲಿ ಮದುವೆ ಮಾಡಿದ್ದರು.

    ಹೆಣ್ಣು ಸಿಕ್ಕ ಖುಷಿಯಲ್ಲಿ ಹಿಂದೂ ಮುಂದು ಯೋಚಿಸದೆ ಮದುವೆ ಮಾಡಿದ ಪಾಲಾಕ್ಷ್ಯ. ಗ್ರಾಮದ ದೇವಸ್ಥಾನದಲ್ಲಿ ಮದುವೆ ಮಾಡಿ ಮುಗಿಸಿದ್ದರು.

    ಮದುವೆಗೆ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಹೆಣ್ಣಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ನೀಡಿದ್ದ ಪಾಲಾಕ್ಷ್ಯ 25 ಗ್ರಾಂ ಚಿನ್ನಾಭರಣ ಹಾಕಲಾಗಿತ್ತು. ಹೆಣ್ಣು ತೋರಿಸಿದ ಬ್ರೋಕರ್‌ ಲಕ್ಷ್ಮಿಗೆ 1.5 ಲಕ್ಷ ಹಣ ನೀಡಿದ್ದರು.

    ಹೆಣ್ಣಿನ ಕಡೆಯವರು ಅಂತ 8 ಜನರನ್ನ ಕರೆ ತಂದಿದ್ದ ಬ್ರೋಕರ್‌ ಲಕ್ಷ್ಮೀ. ಮದುವೆ ಮುಗಿದ ಎರಡು ದಿನದ ನಂತರ ಸಂಪ್ರದಾಯದ ಕಾರಣ ನೀಡಿ ಯುವತಿಯೊಬ್ಬಳನ್ನೇ ವಾಪಸ್‌ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಹಣ–ಚಿನ್ನದ ಒಡವೆ ಸಹಿತ ಮದುಮಗಳನ್ನ ಕರೆದುಕೊಂಡು ಹೋಗಿದ್ದರು.

    ವಾರ ಕಳೆದರೂ ಮದುಮಗಳು ವಾಪಸ್‌ ಬಂದಿರಲಿಲ್ಲ. ಆತಂಕಗೊಂಡ ಪಾಲಾಕ್ಷ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲು ಆಗಿದೆ.  ನಡೆದದ್ದು ನಕಲಿ ಮದುವೆ ಬಂದವರು ದೋಖಾ ಗಿರಾಕಿಗಳು ಎಂಬ ಸತ್ಯ ಬಯಲಾಗಿದೆ.

    ವಾಪಸ್‌ ಗುಬ್ಬಿಗೆ ಬಂದ ಪಾಲಕ್ಷ್ಯ ಎಲ್ಲಾರ ವಿರುದ್ಧ ಪೊಲೀಸ್ ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ನಿರಂತರ ತನಿಖೆ ನಡೆಸಿದ್ದರು.

    ಒಂದು ವರ್ಷದಿಂದ ಈ ಕುಟುಂಬ ತಲೆ ಮರೆಸಿಕೊಂಡಿತ್ತು, ಇದೀಗ ಮಹಾರಾಷ್ಟ್ರ, ಹುಬ್ಬಳ್ಳಿ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.

    ಮದುವೆ ಹೆಸರಲ್ಲಿ ದೋಖಾ ಮಾಡಲು ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿ, ಮದುವೆ ಹೆಸರಲ್ಲಿ ವಂಚನೆ ಮಾಡುವುದನ್ನೇ ಈ ತಂಡ ವೃತ್ತಿ ಮಾಡಿಕೊಂಡಿತ್ತು. ಇದಕ್ಕಾಗಿ ನಕಲಿ ಅಡ್ರೆಸ್‌ ನಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಳ್ಳುತ್ತಿದ್ದರು.

    ಆಧಾರ್ ಕಾರ್ಡ್ ತೋರಿಸಿ ಗಂಡಿನ‌ ಮನೆಯವರನ್ನ ನಂಬಿಸುತ್ತಿದ್ದರು. ನಾಲ್ವರಿಗೂ ಹೆಚ್ಚು ಜನರಿಗೆ ಮದುವೆ ಹೆಸರಿನಲ್ಲಿ ದೋಖಾ ಮಾಡಿದ್ದ ಗ್ಯಾಂಗ್‌. ಮೂರು ವರ್ಷದಲ್ಲಿ ನಾಲ್ಕು ಮದುವೆ ಮಾಡಿ ಮೋಸ ಮಾಡಿದೆ.

    ಸಂಪ್ರದಾಯದಂತೆ ಮದುವೆ ಮಾಡಿಸಿ ನಂಬಿಸಿ ಮೋಸ ಮಾಡಿದ ಬ್ರೋಕರ್‌ ಇಡೀ ಪ್ರಕರಣದ ಸೂತ್ರಧಾರಿಯಾಗಿದ್ದನು.  ಮದುಮಗಳಿಗೆ ಈಗಾಗ್ಲೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಚಿಕ್ಕಪ್ಪ-ಚಿಕ್ಕಮ್ಮನ ಹೆಸರಿನಲ್ಲಿ ಬಂದಿದ್ದ  ನಕಲಿಗಳನ್ನು ಗುಬ್ಬಿ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಈ  ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.