ಹೆಚ್ ಡಿ ಕೋಟೆ/ ಸರಗೂರು: ಕೊವಿಡ್ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ಬಾವಲಿ ಚೆಕ್ ಪೋಸ್ಟ್ ಗೆ ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಭೇಟಿ ನೀಡಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಡಿ.ಪಿ. ಕುಪ್ಪೇಗೆ ವ್ಯಾಪ್ತಿಗೆ ಬರುವ ಬಾವಲಿ ಚೆಕ್ ಪೋಸ್ಟ್ ಬಳಿ ಕೇರಳದಿಂದ ಹೆಚ್.ಡಿ. ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ಮೂಲಕ ಕರ್ನಾಟಕ್ಕೆ ಆಗಮಿಸುವವರ ಮೇಲೆ ಕಣ್ಣಿಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯಾಧಿಕಾರಿ ಕೊವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಮೇರೆಗೆ ಕೇರಳದಿಂದ ಬರುವ ಜನರನ್ನು ಪರಿಶೀಲನೆ ನಡೆಸಿ, ನೆಗೆಟಿವ್ ರಿಪೋರ್ಟ್ ನೋಡಿ ಪ್ರವೇಶ ನೀಡಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿಡ್ ವೈರಸ್ ಮತ್ತು ಒಮಿಕ್ರಾನ್ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದೇವೆ. 72 ಗಂಟೆಗಳಲ್ಲಿ ಕೊವಿಡ್ ಟೆಸ್ಟ್ ಆಗಿ ನೆಗೆಟಿವ್ ರಿಪೋರ್ಟ್ ಇರುವವರನ್ನು Q R ಬಾರ್ ಕೋಡಿಂಗ್ ನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಬೆಳ್ಳಗೆ 6 ಗಂಟೆಯಿಂದ ಸಂಜೆ 6 ತನಕ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದೇವೆ ಮತ್ತು ವಾಹನದಲ್ಲಿ ಓಡಾಡುವ ಎಲ್ಲ ಜನರುಗಳ ಹೆಸರುಗಳನ್ನು ನೊಂದಣಿ ಮಾಡುತ್ತಿದೇವೆ ಎಂದು ತಿಳಿಸಿದರು.
ವಾರದ ಅಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇರುವುದರಿಂದ ಜನರ ಮತ್ತು ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ . ಅವಶ್ಯಕತೆ ಇದ್ದಲ್ಲಿ ಮಾತ್ರ ಗೂಡ್ಸ್ ವಾಹನ , ತುತ್ತು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಆದುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು,
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy