ತುಮಕೂರು : ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಎರಡನೇ ತರಗತಿ ವಿದ್ಯಾರ್ಥಿ ಒಬ್ಬ ವಿದ್ಯುತ್ ತಂತಿತಗುಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಎಚ್. ಕಾವಲ್ ಬಳಿ ನಡೆದಿದೆ.
ಹೇಮಂತ್ 8 ಮೃತ ದುರ್ದೈವಿ ವಿದ್ಯಾರ್ಥಿಯಾಗಿದ್ದಾನೆ. ಹೆಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ತಂತಿ ಬಿದ್ದಿತ್ತು, ಆಕಸ್ಮಾತ್ ಅದನ್ನು ಮುಟ್ಟಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ವಿದ್ಯುತ್ ಸ್ಪರ್ಶಿಸಿ ಆತ ಮೃತಪಟ್ಟಿದ್ದಾನೆ.
ಹಲವು ಬಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಸರಿಪಡಿಸುವ ಪ್ರಯತ್ನದಲ್ಲಿ ಅಧಿಕಾರಿಗಳು ಮುಂದಾಗಿರಲಿಲ್ಲ ಈಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಸಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q