nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್. ಚಲುವರಾಯಸ್ವಾಮಿ
    ರಾಜ್ಯ ಸುದ್ದಿ August 16, 2024

    ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್. ಚಲುವರಾಯಸ್ವಾಮಿ

    By adminAugust 16, 2024No Comments3 Mins Read
    chaluvanarayana swamy

    ಮಂಡ್ಯ:  ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು‌ ತಿಳಿಸಿದರು.

    ಅವರು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಕನ್ನಡ ಎಂದ ತಕ್ಷಣ ಎಲ್ಲರಿಗೂ ಮನಸ್ಸಿನಲ್ಲಿ ಸಂತೋಷ, ಮಂಡ್ಯ ಜಿಲ್ಲೆಯಲ್ಲಿ ಇದು ಮೂರನೇ ಬಾರಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರಕಿರುವುದು ಸಂತೋಷದ ವಿಷಯವಾಗಿದೆ ಎಂದರು.


    Provided by
    Provided by

    ಇಂದು ಆಯೋಜಿಸಿರುವ ಸಭೆಯು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡುವ ಕಾರ್ಯಕ್ರಮವಾಗಿದೆ. ಸಮಿತಿಯಲ್ಲಿರುವ ಪ್ರತಿಯೊಬ್ಬರು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ. ಶಾಸಕರು ಹಾಗೂ ಇನ್ನಿತರ ಗಣ್ಯರನ್ನು  ಸಮಿತಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಗಳಿಂದ ಕನ್ನಡಾಭಿಮಾನಿಗಳನ್ನು‌ ಆಗಮಿಸುವಂತೆ ಸಮ್ಮೇಳನವನ್ನು ಸಜ್ಜುಗೊಳಿಸೋಣ, ಪ್ರತಿಯೊಬ್ಬರಿಗೂ ಆಹ್ವಾನ ನೀಡೋಣ ಎಂದರು.

    ಎಲ್ಲಾ ಸಮಿತಿಯು ಸಮನ್ವಯದಿಂದ ಕಾರ್ಯನಿರ್ವಹಿಸೋಣ ಯಾವುದೇ ಗೊಂದಲ ಇದ್ದರೆ ಹಿರಿಯ ಅಧಿಕಾರಿಗಳು ಹಾಗೂ  ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಿ. ಸಮ್ಮೇಳನವನ್ನು ಆಕರ್ಷಿತವಾಗಿ ಮಾಡಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಿ ಎಂದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಚರಿಸಲು 28 ಸಮಿತಿಯನ್ನು ರಚಿಸಲಾಗಿದೆ. ಎಲ್ಲರೂ ಸಂಘಟಿತರಾಗಿ ಕೆಲಸ ನಿರ್ವಹಿಸೋಣ, ಮಹಾಪೋಷಕರಾಗಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಕರ್ನಾಟಕ ಎಂದು ಹೆಸರು ನಾಮಕರಣವಾದ ನಂತರ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಚರಿಸಲಾಯಿತು. ಡಿಸೆಂಬರ್ ಮಾಹೆಯಲ್ಲಿ ಕ್ರಿಷಮಸ್ ರಜೆಯಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಕನ್ನಡ ಆಸಕ್ತರನ್ನು ಸೇರಿಸುವ ಉದ್ದೇಶದಿಂದ ಡಿಸೆಂಬರ್ 20, 21 ಹಾಗೂ 22 ರಂದು ಆಚರಿಸಲಾಗುತ್ತಿದೆ.

    ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲಾಡಳಿತ, ಸರ್ಕಾರಕ್ಕೆ ಸೀಮಿತ ಮಾಡದೇ ಪ್ರತಿಯೊಬ್ಬರು ಸೇರಿ ಕೊಂಡು ಐತಿಹಾಸಿಕ ಹಬ್ಬವಾಗಿ ಆಚರಿಸಿ. ದಾಖಲೆ ಸೃಷ್ಠಿಸುವ ರೀತಿ ಸಾಹಿತ್ಯ ಸಮ್ಮೇಳನವನ್ನು ಎಲ್ಲರ ಮನಸ್ಸಿನಲ್ಲಿ ಸವಿ ನೆನಪಾಗಿ ಉಳಿಯುವ ರೀತಿ ಮಾಡೋಣ ಎಂದರು.

    ಕನ್ನಡ ಸಾಹಿತ್ಯ ಸಮ್ಮೇಳನದ ಮಹಾಪೋಷಕರಾದ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ: ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಅವರು ಮಾತನಾಡಿ ಕನ್ನಡ ನಾಡು ನುಡಿ, ಭಾಷೆಯನ್ನು ಸಂಭ್ರಮಿಸುವ ಹಬ್ಬ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ. ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಭೌತಿಕ, ಮಾನಸಿಕ ಶಕ್ತಿ ನೀಡುವ ನಮ್ಮ ಕನ್ನಡ ಭಾಷೆಯ ಹಬ್ಬವನ್ನು ಸಂಭ್ರಮಿಸೋಣ. ಪ್ರತಿಯೊಂದು ಕಲಿಕಾ ವಿಭಾಗ ಹಾಗೂ ಕ್ಷೇತ್ರದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದರು.

    ಸಾಹಿತ್ಯ ಸಮ್ಮೇಳನದಲ್ಲಿ  ಕನ್ನಡ ಡಿಂಡಿಮವನ್ನು ಬಾರಿಸಬೇಕು ಇದಕ್ಕೆ  ಕನ್ನಡದ ಬಗ್ಗೆ ಆಸಕ್ತಿ ಮೂಡಿಸಲು ಸತ್ತಂತಿಹರನ್ನು  ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸಿ ಸಮ್ಮೇಳನವನ್ನು ಉತ್ತಮವಾಗಿ ಆಚರಿಸೋಣ ಎಂದರು.

    ಇಂಜಿನಿಯರಿಂಗ್ ವಿಭಾಗದಲ್ಲಿ ಕನ್ನಡ ಭಾಷೆಯ ಮೂಲಕ ಕಲಿಕೆಗೆ ಅವಕಾಶ ನೀಡಿದರು ವಿದ್ಯಾರ್ಥಿಗಳು ದಾಖಲಾಗುವುದಿಲ್ಲ ಇದಕ್ಕೆ ಮುಖ್ಯ ಕಾರಣ ಮುಂದಿನ ದಿನಗಳಲ್ಲಿ ಕೆಲಸದ ಭದ್ರತೆ ಇಲ್ಲ ಎಂದು. ಕನ್ನಡ ಭಾಷೆಯಲ್ಲಿ ಕಲಿತ ನಂತರ ಉದ್ಯೋಗದ ಭದ್ರತೆ ಒದಗಿಸುವ ರೀತಿ ಚಿಂತನೆ ನಡೆಸಬೇಕು ಎಂದರು.

    ಕನ್ನಡ ಜ್ಯೋತಿ ರಥ ಯಾತ್ರೆ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ. ಸಮ್ಮೇಳನದ ಪ್ರಮುಖ್ಯತೆ ಹಾಗೂ ಆಹ್ವಾನ ನೀಡಲಿದೆ. ಇದರ ಮಾದರಿ ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಸಿದ್ಧಪಡಿಸಿ ಚಾಲನೆ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.

    ಜಿಲ್ಲಾಧಿಕಾರಿ ಡಾ.ಕುಮಾರ ಅವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷರಾದ ಡಾ: ಮೀರಾ ಶಿವಲಿಂಗಯ್ಯ ಅವರು ವಂದಿಸಿದರು.

    ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಮಾಜಿ ಶಾಸಕ ಅನ್ನದಾನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಂಚಾಲಕರು, ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

    ಜಿಲ್ಲಾಧಿಕಾರಿ ಡಾ: ಕುಮಾರ ಅವರು ಕಾರ್ಯಕ್ರಮ ಮುಗಿದ ನಂತರ ಆಗಸ್ಟ್ 30 ರೊಳಗೆ ಎಲ್ಲಾ ಸಮಿತಿಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಒದಗಿಸಬೇಕು.

    ವಸತಿ, ವೇದಿಕೆ, ಆಹಾರ ಸಮಿತಿ ಅವರು ಕೆಲಸ ಶೀಘ್ರವಾಗಿ ಪ್ರಾರಂಭಿಸಬೇಕು. ಜಿಲ್ಲೆಯಲ್ಲಿ ಲಭ್ಯವಿರುವ ವಸತಿ ಶಾಲೆ, ಹೋಟೆಲ್‌, ರೆಸಾಟ್೯, ಹೋಮ ಸ್ಟೇ ಸೇರಿದಂತೆ ವಿವಿಧ‌ ಕಡೆ ಲಭ್ಯವಾಗುವ ವಸತಿಗಳ ವಿವರವನ್ನು ಪಡೆದುಕೊಳ್ಳಿ ಎಂದರು.

    ಎಲ್ಲಾ ಸಮಿತಿಗಳು ಅನುದಾನವನ್ನು ಪಾರದರ್ಶಕವಾಗಿ ವೆಚ್ಚ ಮಾಡಬೇಕು. ಹಣ ಪೋಲಾಗದಂತೆ ನೋಡಿಕೊಳ್ಳಬೇಕು. ಸದಸ್ಯ ಕಾರ್ಯದರ್ಶಿಗಳು ಹಾಗೂ ಸಂಚಾಲಕರು ಸರಿಯಾದ ರೀತಿಯಲ್ಲಿ ಕಡತ ನಿರ್ವಹಿಸಿ ಸಮಿತಿಯಲ್ಲಿ ಮಂಡಿಸಬೇಕು. ಸಭೆಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರುಗಲಿರುವ 33ನೇ ವರ್ಷದ ಹೊನಲು ಬೆಳಕಿನ…

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.