ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶತಮಾನ ಕಂಡ ಶಾಲಾ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಧ್ವಜಾರೋಹಣವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಸೈಯದ್ ಶಾನವಾಜ್ ನೆರವೇರಿಸಿದರು. ಎಲ್ಲಾ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸಲಾಯಿತು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ಪಿಡಿಓ ಶ್ರೀರಾಮನಾಯ್ಕ, ಬಾಲಕರ ಶಾಲೆಯ ಮುಖ್ಯ ಶಿಕ್ಷಕ ಐ.ಎ.ನಾರಾಯಣಪ್ಪ ಹಾಗೂ ಎಲ್ಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q