ತುಮಕೂರು: ಶಾಲಾ ಬಸ್ ಹರಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ನಡೆದಿದೆ.
ತೇಜಸ್(14) ವರ್ಷದ ಬಾಲಕ ಮೃತ ದುರ್ದೈವಿಯಾಗಿದ್ದಾನೆ. ಬೈಕ್ ನಿಂದ ಬಾಲಕ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ವೇಳೆ ಬಸ್ ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ತೇಜಸ್ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬೈಕ್ ನಿಂದ ಬಿದ್ದ ವೇಳೆ ಬಾಲಕನ ತಲೆಯ ಮೇಲೆಯೇ ಬಸ್ ನ ಚಕ್ರ ಹರಿದಿದೆ. ಪರಿಣಾಮವಾಗಿ ಬಾಲಕ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ. ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q