ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ತಿಳಿಸಿದರು.
ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ. ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


