ಚಿತ್ರದುರ್ಗ: ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲು ಗುರಿ ಹೊಂದಲಾಗಿದ್ದು, ಭೂಸ್ವಾಧೀನವಾದ ಎಲ್ಲ ರೈತರಿಗೆ ಫೆಬ್ರವರಿ 15ರೊಳಗೆ ಪರಿಹಾರ ಹಣ ಪಾವತಿಸಲು ಭೂಸ್ವಾಧೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚಿಸಿದರು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸರ್ವೇ ಮಾಡಲಾದ ರೈಲ್ವೆ ಮಾರ್ಗದಲ್ಲಿ ಗುರಿತಿಸಲಾದ ಕಲ್ಲುಗಳನ್ನು ಕಿತ್ತು ಹಾಕಲಾಗಿದೆ. ಇದನ್ನು ಮುಂದಿನ ವಾರದಲ್ಲಿ ಸರ್ವೇ ಅಧಿಕಾರಿಗಳು, ರೈಲ್ವೆ ಇಂಜಿನಿಯರ್‌ಗಳು ಸೇರಿಕೊಂಡು ಬಾಂದ್‍ಗಲ್ಲುಗಳನ್ನು ಪುನರ್ ಸ್ಥಾಪಿಸಬೇಕು ಎಂದು ಸರ್ವೇ ಹಾಗೂ ರೈಲ್ವೆ ಇಂಜಿನಿಯರ್‌ಗಳಿಗೆ ಸಚಿವರು ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy