ಅಸ್ಸಾಂ: ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬೆನ್ನಲ್ಲೇ ಉದ್ರಿಕ್ತ ಗ್ರಾಮಸ್ಥರು ಶಾಲೆಗೆ ಬೆಂಕಿಯಿಟ್ಟು ಧ್ವಂಸಗೊಳಿಸಿದ ಘಟನೆ ಕರೀಂಗಂಜ್ ನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಜೊತೆಗೆ ಈ ಶಾಲೆಯ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ನೋಡುವಂತೆ ಒತ್ತಡ ಹಾಕುತ್ತಿದ್ದ, ಬಳಿಕ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯೊಬ್ಬಳು ಶಿಕ್ಷಕ ತನಗೆ ಅಶ್ಲೀಲ ಚಿತ್ರ ತೋರಿಸಿ, ಮೈ ಸ್ಪರ್ಶಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ತನ್ನ ಮನೆಯಲ್ಲಿ ಪೋಷಕರ ಬಳಿ ಹೇಳಿಕೊಂಡಿದ್ದಳು. ಇದರಿಂದ ಕೆಂಡಾಮಂಡಲವಾದ ಪೋಷಕರು ಗ್ರಾಮಸ್ಥರೊಂದಿಗೆ ಶಾಲೆಗೆ ಬಂದಿದ್ದು, ಶಿಕ್ಷಕನನ್ನು ವಿಚಾರಿಸಲು ಮುಂದಾಗಿದ್ದಾರೆ.
ಈ ವೇಳೆ ಶಿಕ್ಷಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಸಾರ್ವಜನಿಕರು ಶಾಲೆಯನ್ನು ಧ್ವಂಸಗೊಳಿಸಿ ಬೆಂಕಿಯಿಟ್ಟಿದ್ದಾರೆ. ಸದ್ಯ ಕಾಮುಕ ಶಿಕ್ಷಕನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q