ಚೆನ್ನೈ: ಎನ್ ಸಿಸಿ ಕ್ಯಾಂಪ್ ನಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ನೀಡಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ.
ಪ್ರಮುಖ ಆರೋಪಿ ಶಿವರಾಮನ್ ಸೇರಿದಂತೆ ಶಾಲೆಯ ಪ್ರಾಂಶುಪಾಲ, ವರದಿಗಾರ, ಇಬ್ಬರು ಶಿಕ್ಷಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿ, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.
ಆಗಸ್ಟ್ 5ರಿಂದ 9ರವರೆಗೆ ಕೃಷ್ಣಗಿರಿ ಜಿಲ್ಲೆಯ ಬರಗೂರು ಖಾಸಗಿ ಶಾಲೆಯಲ್ಲಿ ಎನ್‌ಸಿಸಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ 17 ಬಾಲಕಿಯರು ಸೇರಿದಂತೆ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಬಿರದಲ್ಲಿ ಲೈಂಗಿಕ ಕಿರುಕುಳ ನಡೆದಿರುವುದು ಶಾಲಾ ಆಡಳಿತ ಮಂಡಳಿಗೆ ತಿಳಿದಿತ್ತು. ಆದರೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗಿತ್ತು. ಇದೀಗ ಶಾಲಾ ಆಡಳಿತ ಮಂಡಳಿ ಕೂಡ ಈ ಪ್ರಕರಣದಲ್ಲಿ ತಪ್ಪಿತಸ್ಥ ಸ್ಥಾನದಲ್ಲಿ ನಿಂತಿದ್ದು, ಕಾನೂನು ಕ್ರಮವಾಗುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q