ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಸಂವಿಧಾನ ಬಾಹಿರವಾಗಿದೆ ಹಾಗೂ ರಾಜ್ಯಪಾಲರ ಈ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಾಂಗ್ರೆಸ್ ಮಾಜಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಹಾಗೂ ತುಮಕೂರು ನಡುವಿನ ರಸ್ತೆಯಲ್ಲಿ ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದರು.
ಸಿದ್ದರಾಮಯ್ಯ ಅಂತಹ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರವಾದದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಕೂಡಲೇ ರಾಜ್ಯಪಾಲರು ಹಿಂಪಡೆಯಬೇಕೆಂದು ಆಗ್ರಹಿಸಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಮುಖಂಡರು ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹೆಬ್ಬೂರು ಸರ್ಕಲ್ ನಲ್ಲಿ ಬೃಹತ್ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಮೆರವಣಿಗೆ ನಡೆಸಿ ರಾಜ್ಯಪಾಲರ ನಡೆ ತೀವ್ರವಾಗಿ ಖಂಡಿಸಿದರು.
ಬಳಿಕ ಹೆಬ್ಬೂರಿನಿಂದ ತುಮಕೂರಿನ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಮಾತನಾಡಿ, ಒಂದು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ– ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತ್ರವಾಗಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು ಇನ್ನಿಲ್ಲದ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವಲ್ಲದೆ ಸಾರ್ವಜನಿಕರು ಸಹ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಸರ್ಕಾರವನ್ನು ಪತನಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಮೈತ್ರಿ ಪಕ್ಷಗಳ ಆಟಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q