ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ವಿದೇಶಿ ವ್ಯಾಸಂಗ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಮತ್ತು ಸಹಾಯಧನದ ಸೌಲಭ್ಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಗಂಗಾಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು 18 ರಿಂದ 55 ವಯೋಮಿತಿಯೊಳಗಿನವರಾಗಿದ್ದು, ಒಂದೇ ಕಡೆ ಹೊಂದಿ ಕೊಂಡಂತೆ 2 ಎಕರೆ ಜಮೀನು ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಹಾಗೂ ನಗರ ಪ್ರದೇಶದವರಿಗೆ 1,20,000 ರೂ.ಗಳ ಒಳಗಿರಬೇಕು.
ಅರಿವು ಯೋಜನೆಯ ಸೌಲಭ್ಯಕ್ಕಾಗಿ 18 ರಿಂದ 30 ವರ್ಷ ವಯೋಮಿತಿಯೊಳಗಿದ್ದು, ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯ ಸೌಲಭ್ಯಕ್ಕಾಗಿ 18 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು.
ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆಯಾಗಬೇಕು.
ಆಸಕ್ತರು ತಮ್ಮ ಅರ್ಜಿಯನ್ನು ಸೆಪ್ಟೆಂಬರ್ 16ರೊಳಗಾಗಿ ಕರ್ನಾಟಕ ಒನ್, ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: https://upparadevelopment.karnataka.gov.in ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ವಾ.ಸಂ. 0816–2005008ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q