nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಲ್ಕತ್ತಾ: ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಎಐಡಿಎಸ್ ಓ ಮೊಂಬತ್ತಿ ಮೆರವಣಿಗೆ
    ತುಮಕೂರು August 22, 2024

    ಕೋಲ್ಕತ್ತಾ: ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಎಐಡಿಎಸ್ ಓ ಮೊಂಬತ್ತಿ ಮೆರವಣಿಗೆ

    By adminAugust 22, 2024No Comments2 Mins Read
    protest

    ತುಮಕೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಕೋಲ್ಕತ್ತಾದ ಆರ್ ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಕಿರಿಯ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯನ್ನು ಖಂಡಿಸಿ ಎಐಡಿಎಸ್ ಓ ವತಿಯಿಂದ ತುಮಕೂರು ಟೌನ್ ಹಾಲ್ ವೃತ್ತದಿಂದ  ಸ್ವಾತಂತ್ರ್ಯ ಚೌಕದವರೆಗೆ ಮೋಂಬತ್ತಿ ಮೆರವಣಿಗೆ ಮಾಡಲಾಯಿತು.

    ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಮಾತನಾಡಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಮಾಧ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನ, ಇಂಟರ್‌ ನೆಟ್, ಮೊಬೈಲ್‌ ಗಳ ಮೂಲಕ ಪೋರ್ನೋಗ್ರಫಿಕ್ ವೆಬ್‌ ಸೈಟ್‌ ಗಳನ್ನು ಹರಿಬಿಡುತ್ತಿರುವುದು, ದುರಾಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣವಾಗಿವೆ. ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೀನ, ಅನಾಗರಿಕ, ಅಮಾನವೀಯ ಕೃತ್ಯವನ್ನು ಎಸಗುತ್ತಿದ್ದಾರೆ. ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಂಡಿಲ್ಲ. ಜೊತೆಗೆ ಇಂದಿನ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಡಿಲತೆ, ನೂನ್ಯತೆಗಳಿಂದಾಗಿ ಎಷ್ಟೋ ಇಂತಹ ಅಪರಾಧಗಳನ್ನು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ವಿದ್ಯಾರ್ಥಿ–ಯುವಜನರು, ಪುರುಷ–ಮಹಿಳೆಯರು ಒಂದಾಗಿ ನಮ್ಮ ದೇಶದ ನವೋದಯ ಹರಿಕಾರರ, ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳ ಜೀವನ ಹೋರಾಟಗಳಿಂದ ಸ್ಪೂರ್ತಿ ಪಡೆದು ಉನ್ನತವಾದ ನೀತಿ, ನೈತಿಕತೆ, ಸಂಸ್ಕೃತಿಯ ತಳಹದಿಯ ಮೇಲೆ ಪ್ರಭಲ ಹೋರಾಟ ಕಟ್ಟಿ ಬೆಳೆಸಬೇಕಾಗಿದೆ. ಇಂತಹ ಹೋರಾಟದ ಮೂಲಕ ಮಾತ್ರವೇ ನಿಜವಾದ ಸಮಾನತೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾದ್ಯ ಎಂದು ಹೇಳಿದರು.


    Provided by
    Provided by

    ಎಐಡಿಎಸ್ ಓ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ, ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಅಲ್ಲದೆ ದೇಶದಾದ್ಯಂತ ಜನರು ಈ ಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಮತ್ತು ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆಯನ್ನು ಹುಟ್ಟಿಸಲು 14 ಆಗಸ್ಟ್ 2024 ರಂದು ಮಧ್ಯರಾತ್ರಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆಯ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯ ಎಸಗಿಸುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಈ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆಸ್ಪತ್ರೆಯ ಅಧಿಕಾರಿಗಳು ಸಹ ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿಲ್ಲ, ಬದಲಾಗಿ ಅಪರಾಧಿಗಳೊಂದಿಗೆ ಶಾಮೀಲಾಗಿದ್ದು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ. ಗುಂಡಾಗಳ ಇಂತಹ ಕೃತ್ಯಗಳು ಅಪರಾಧ ಎಸಗಿದವರಿಗೆ ಮಾತ್ರ ಸಹಾಯ ಮಾಡುತ್ತವೆ ಮತ್ತು ನಿಜವಾದ ಪ್ರತಿಭಟನಾಕಾರರನ್ನು ಸಮಾಜ ವಿರೋಧಿಗಳೆಂದು ಬಿಂಬಿಸುವ ಮತ್ತು ಚಳವಳಿಯನ್ನು ಹತ್ತಿಕ್ಕುವ ಶಕ್ತಿಯ ಕೈಗಳನ್ನು ಬಲಪಡಿಸುತ್ತವೆ. ಆದ್ದರಿಂದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೆ ಜಾಗರೂಕತೆಯಿಂದ ಹೋರಾಟವನ್ನು ಬೆಳೆಸಬೇಕಾಗಿದೆ ಎಂದರು.

    ಎಐಡಿಎಸ್ ಓ ನ  ಭರತ್, ಸೈಯದ್, ಸುಮಂತ್ ಮುಂತಾದವರು ಮೆರವಣಿಗೆಯ ನೇತೃತ್ವ ವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.