ತುಮಕೂರು: ಮೂಡಾ ಹಗರಣದಲ್ಲಿ ಭಾಗಿಯಾಗಿರೋ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸದಾನಂದಗೌಡ ನೇತೃತ್ವದಲ್ಲಿ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಮುಖ್ಯಮಂತ್ರಿಗಳೊಂದಿಗೆ ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಮಂದಿ ಭ್ರಷ್ಟ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ರಾಜ್ಯಪಾಲರ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಮುಖ್ಯಮಂತ್ರಿ ಅವರ ಮೂಡ ಹಗರಣದ ಕುರಿತು ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಮುಖಂಡರ ಕ್ರಮ ಸರಿಯಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q