ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಓಬಳಾಪುರ ಗ್ರಾಮದ ಸಮೀಪ ಬೈಕ್ ಮತ್ತು ಜಲ್ಲಿ ತುಂಬಿದ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಓಬಳಾಪುರ ಗ್ರಾಮದ ಗೋವಿಂದಪ್ಪ(40) ಲಿಂಗದಹಳ್ಳಿಯಿಂದ ಸ್ವಗ್ರಾಮಕ್ಕೆ ಬರುತ್ತಿದ್ದ ವೇಳೆ, ಓಬಳಾಪುರ ಗುಟ್ಟೆಯ ಸಮೀಪ ಹನುಮಂತನಹಳ್ಳಿಯಿಂದ ಜಲ್ಲಿ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಮತ್ತು ಈತನ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ಕೆಳಕ್ಕೆ ಬಿದ್ದಿದ್ದ ಗೋವಿಂದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ವೈ.ಎನ್.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಗೋವಿಂದಪ್ಪ ಪತ್ನಿ ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q