ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಚರ್ಚಿಸಲು ಮತ್ತೊಮ್ಮೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವರದಿಯಾಗಿದೆ.
ಎರಡು ತಿಂಗಳ ಬಳಿಕ ಸಚಿವ ಸಂಪುಟ ಪುನಾರ್ಚನೆ ಸಾಧ್ಯತೆ ಇದೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಿರ್ಧರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


