ತುಮಕೂರು: ವಿಶ್ವ ಹಿರಿಯನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಆಗಸ್ಟ್ 30ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲೆಯ ಹಿರಿಯನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ.
ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಾಲ್ ಇನ್ ದಿ ಬಕೆಟ್ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಏಕಪಾತ್ರಾಭಿನಯ, ಗಾಯನ (ಜನಪದ ಅಥವಾ ಭಾವಗೀತೆ) ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, 60 ರಿಂದ 70 ವರ್ಷ ಹಾಗೂ 70ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕ ಮಹಿಳಾ/ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು.
ಆಸಕ್ತ ಹಿರಿಯನಾಗರಿಕರು ಆಗಸ್ಟ್ 29ರೊಳಗಾಗಿ ಹಿರಿಯನಾಗರಿಕರ ಸಹಾಯವಾಣಿ ಕೇಂದ್ರದ ಕಚೇರಿ, ಹಳೇ ಮಹಿಳಾ ಠಾಣೆಯ ಆವರಣ, ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗ, ತುಮಕೂರು ಇಲ್ಲಿಗೆ ಆಧಾರ್ ಕಾರ್ಡ್ ನೊಂದಿಗೆ ಖುದ್ದು ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ: 8792040146ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q