ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘದ ಸಹಯೋಗದಲ್ಲಿ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಕೃಷ್ಣ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಗೊಲ್ಲ(ಯಾದವ) ಸಮುದಾಯದ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಮಂದಿ ಗೊಲ್ಲ(ಯಾದವ) ಸಮುದಾಯದ ಸಾಧಕರನ್ನು ಸನ್ಮಾನಿಸಲಾಗುವುದು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಜಿ.ಎಸ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ಬೆಳ್ಳಿರಥದಲ್ಲಿ ಶ್ರೀ ಕೃಷ್ಣನ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಜಿಲ್ಲೆಯ ವಿವಿಧ ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


