ಬೆಂಗಳೂರು: ಸಿಲಿಕಾನ್ ಸಿಟಿಯಾದ್ಯಂತ ಡ್ರಂಕ್ ಅಂಡ್ ಡ್ರೈವ್ ಬೇಟೆ ಆರಂಭಗೊಂಡಿದೆ. ನಗರದಾದ್ಯಂತ ಪೊಲೀಸರು ಹೆಣೆದಿದ್ದ ಬಲೆಗೆ ವಾಹನ ಸವಾರರು ಬಿದ್ದಿದ್ದಾರೆ.
ಮದ್ಯಪಾನ ಮಾಡುವ ವಾಹನ ಸವಾರರ ಪರಿಶೀಲನೆಗೆ ಇಳಿದಿದ್ದು ದಂಡ ವಿಧಿಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ಒಂದೇ ದಿನ 1200 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಫೀಲ್ಡ್ ಗೆ ಇಳಿದಿದ್ದು 34,676 ವಾಹನಗಳ ತಪಾಸಣೆ ನಡೆಸಿ 779 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಿಸಲಾಗಿದೆ.
ಕುಡಿದು ವಾಹನ ಚಾಲನೆ ಮಾಡಿದ್ರೆ ದಂಡ ಕಟ್ಟಲೇ ಬೇಕಿದೆ. ಅಲ್ಲದೇ ಕುಡಿದು ವಾಹನ ಚಾಲನೆ ಮಾಡುವವರ ವಾಹನಗಳನ್ನು ವಶಕ್ಕೆ ಪಡೆದು ನೋಟಿಸ್ ಕೊಟ್ಟು ಕಳಿಸಿದ್ದಾರೆ. ಅಷ್ಟೇ ಅಲ್ಲ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸಲು ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


