ಮೈಸೂರು: ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಲದರ್ಶಿನಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು. ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ. ಅದೇ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ಮನವಿಯನ್ನು ಯಾಕೆ ಇನ್ನು ಪರಿಗಣಿಸಿಲ್ಲ? ಅಂತ ಅವರು ಪ್ರಶ್ನಿಸಿದರು.
ಕುಮಾರಸ್ವಾಮಿ, ಜನಾರ್ಧನರೆಡ್ಡಿ, ಶಶಿಕಲಾ ಜೊಲ್ಲೆ ಮತ್ತು ಮುರುಗೇಶ್ ನಿರಾಣಿ ಅವರ ವಿರುದ್ದವು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೆ ಅವರು ಕೇಂದ್ರದ ಸಚಿವರು ಎಂದು ಅನುಮತಿ ಕೊಟ್ಟಿಲ್ಲ. ಇದರಿಂದ ಸ್ಪಷ್ಟವಾಗಿ ಗೊತಾಗುತ್ತೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


