ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ.
ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ನಗರದ ಇಸ್ಕಾನ್ ಸೇರಿದಂತೆ ಹಲವು ದೇವಾಲಯ, ಮಠಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳನ್ನು ಕೋರಿದ್ದಾರೆ.
ಭಾರತದಲ್ಲಿ ಶ್ರೀಕೃಷ್ಣನ ಜನ್ಮಾಷ್ಟಮಿ ಹಬ್ಬ ತನ್ನದೇ ಆದ ವಿಶೇಷತೆಗಳನ್ನು ಹೊಂದಿದೆ. ಮನೆ ಮನೆಗಳಲ್ಲಿ ಮಕ್ಕಳು ರಾಧಾ–ಕೃಷ್ಣರಾಗುತ್ತಾರೆ. ಮಕ್ಕಳಿಗೆ ರಾಧಾ–ಕೃಷ್ಣನ ವೇಷಭೂಷಣ ತೊಡಿಸಿ ಪೋಷಕರು ಸಂಭ್ರಮಿಸುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q