ಕೊಲ್ಕತ್ತಾ: ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ವೈದ್ಯಯ ಮೇಲೆ ಅತ್ಯಾಚಾರ ಕೊಲೆ ನಡೆಸುವುದಕ್ಕೂ ಮುನ್ನ ಮತ್ತೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದ ಎನ್ನುವ ಮಾಹಿತಿ ಬಯಲಾಗಿದೆ.
ಆರೋಪಿ ಸಂಜಯ್ ರಾಯ್ ಭಾನುವಾರ ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸಂಜೋಯ್ ರಾಯ್ ಸುಳ್ಳು ಪತ್ತೆ ಪರೀಕ್ಷೆಯ ಸಮಯದಲ್ಲಿ ಅಪರಾಧಕ್ಕೆ ಕೆಲವು ಗಂಟೆಗಳ ಮೊದಲು ತಮ್ಮ ಸ್ನೇಹಿತನೊಂದಿಗೆ ರೆಡ್ ಲೈಟ್ ಪ್ರದೇಶಕ್ಕೆ ಭೇಟಿ ನೀಡಿದ್ದ ಎಂದು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಆ ಪ್ರದೇಶದಲ್ಲಿ ಆತ ಯಾರೊಂದಿಗೂ ಲೈಂಗಿಕ ಸಂಬಂಧ ನಡೆಸಿರಲಿಲ್ಲವಂತೆ. ಆದ್ರೆ ಬೀದಿಯಲ್ಲಿ ಇನ್ನೊಬ್ಬ ಮಹಿಳೆಗೆ ಕಿರುಕುಳ ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಅಲ್ಲದೇ ಘಟನೆ ನಡೆದ ದಿನ ಸಂಜಯ್ ರಾಯ್ ತನ್ನ ಗೆಳತಿಗೆ ವೀಡಿಯೊ ಕರೆ ಮಾಡಿ ಅವಳ ನಗ್ನ ಫೋಟೋಗಳನ್ನು ಕೇಳಿದನು. ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿದ್ದನು. ನಂತರ ಆತ ರೆಡ್ ಲೈಟ್ ಏರಿಯಾಗೆ ತೆರಳಿದ್ದನು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q