ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..
ಜೆಜೆಎಂ ಕಾಮಗಾರಿಯ ಬಿಲ್ ಪಾಸ್ ಮಾಡಲು ಎಇಇ ಉಮಾ ಮಹೇಶ್ ಸೂಚನೆ ಮೇರೆಗೆ ಗುತ್ತಿಗೆದಾರ ಚಿಕ್ಕೇಗೌಡ ಎಂಬುವರಿಂದ 1.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಹೊರಗುತ್ತಿಗೆ ಎ.ಇ. ಶಶಿಕುಮಾರ್, ಎ.ಇ. ಕಿರಣ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್.ಪಿ.ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಡಿ.ವೈ.ಎಸ್.ಪಿ.ಗಳಾದ ಉಮಾಶಂಕರ್, ಹೆಚ್. ಜಿ. ರಾಮಕೃಷ್ಣ, ಇನ್ಸ್ ಪೆಕ್ಟರ್ ಗಳಾದ ಮಹಮ್ಮದ್ ಸಲೀಂ, ಶಿವರುದ್ರಪ್ಪ ಮೇಟಿ, ಸುರೇಶ್ ಗೌಡ ಮತ್ತು ಸಿಬ್ಬಂದಿ ವರ್ಗ ಸೋಮವಾರ ಮಧ್ಯಾಹ್ನ ದಿಢೀರ್ ದಾಳಿ ಮಾಡಿ ಮೂರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೂರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ತುಮಕೂರು ಲೋಕಾಯುಕ್ತ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q