ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸ ಬಯಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಗಸ್ಟ್ 30 ರಿಂದ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಪರಿಶಿಷ್ಟ ಪಂಗಡದ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಉದ್ಯಮಗಳ ಆಯ್ಕೆ, ಮಾರುಕಟ್ಟೆ, ಯೋಜನಾವರದಿ, ತೆರಿಗೆ ನಿರ್ವಹಣೆ ಮತ್ತು ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಆಸಕ್ತರು ಆಗಸ್ಟ್ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯುವ ತರಬೇತಿಗೆ ನೇರವಾಗಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಬಿ.ಹೆಚ್.ರಸ್ತೆ, ತುಮಕೂರು ಅಥವಾ ದೂ.ವಾ.ಸಂಖ್ಯೆ: 8073313988ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q